Loading video

ನೀವು ಹೇಳಿದರೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದ ಪರಮೇಶ್ವರ್!

|

Updated on: Feb 23, 2025 | 10:28 AM

ತುಮಕೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳ ನಡುವೆ ಈ ಹೇಳಿಕೆ ಬಹಳ ಮಹತ್ವ ಪಡೆದಿದೆ. ಕಾರ್ಯಕರ್ತರು ಅವರನ್ನು ರಾಜೀನಾಮೆ ನೀಡದಂತೆ ಮನವಿ ಮಾಡಿದ್ದಾರೆ. ಈ ಘಟನೆಯು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ತುಮಕೂರು, ಫೆಬ್ರವರಿ 23: ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡುವೆಯೇ ಗೃಹ ಸಚಿವ ಜಿ. ಪರಮೇಶ್ವರ್​ (G. Parameshwara) ರಾಜೀನಾಮೆಯ ಮಾತುಗಳನ್ನು ಆಡಿದ್ದಾರೆ. ಶನಿವಾರ (ಫೆ.23) ಕೊರಟಗೆರೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜಿ ಪರಮೇಶ್ವರ್​, ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸ್ಸಿನ ಆಕಾಂಕ್ಷೆಯಂತೆ ಸ್ಪಂದಿಸಲು ನನಗೆ ಸಾಧ್ಯವಾಗುತ್ತಿಲ್ಲ. ನೀವು ಹೇಳಿದರೆ “ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಹೇಳಿದರು. ಜಿ ಪರಮೇಶ್ವರ್ ಹೇಳಿಕೆಯಿಂದ ವಿಚಲಿತರಾದ ‘ಕೈ’ ಕಾರ್ಯಕರ್ತರು, ತಕ್ಷಣ ರಾಜೀನಾಮೆ ಕೊಡಬೇಡಿ ಅಂತಾ ಕೂಗಿದರು. ನೀವು ಇನ್ನೂ ಮುಖ್ಯಮಂತ್ರಿ ಆಗಬೇಕು, ರಾಜೀನಾಮೆ ಕೊಡಬೇಡಿ ಎಂದು ಕೂಗಲು ಆರಂಭಿಸಿದರು.

Published on: Feb 23, 2025 10:28 AM