ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

Edited By:

Updated on: Feb 11, 2026 | 6:42 AM

ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಲಕ್ಕುಂಡಿ ಗ್ರಾಮದ ಅರ್ಧನಾರೀಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ದೇಗುಲದ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ನಿಜವಾದ ನಾಗಸರ್ಪ ಕಾಣಿಸಿಕೊಂಡು ಕಾರ್ಮಿಕರಲ್ಲಿ ಆತಂಕ ಮೂಡಿಸಿತು. ನಿಜ ನಾಗ ಸರ್ಪದ ವಿಡಿಯೋ ಇಲ್ಲಿದೆ.

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುದುಗಿದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’ ಎಂಬ ಶೀರ್ಷಿಕೆಯಡಿ ಟಿವಿ9 ವರದಿ ಪ್ರಸಾರ ಮಾಡಿತ್ತು. ನಂತರ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗೆ ವೇಗ ದೊರೆತಿತ್ತು.

ಈ ಹಿನ್ನೆಲೆ ದೇವಸ್ಥಾನದ ಆವರಣ ಸ್ವಚ್ಛಗೊಳಿಸುವ ವೇಳೆ ಮಾರುದ್ದದ ನಾಗರ ಹಾವು ಪತ್ತೆಯಾಗಿದೆ. ಹಾವು ಕಾಣಿಸಿಕೊಂಡ ತಕ್ಷಣ ಕಾರ್ಮಿಕರು ದಂಗಾಗಿ ಕೆಲಕಾಲ ಕೆಲಸ ನಿಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಹಾವು ಸರಿದು ಹೋಗಿದೆ. ನಂತರ ಭಯದೊಂದಿಗೇ ಕಾರ್ಮಿಕರು ಸ್ವಚ್ಛತಾ ಕಾರ್ಯ ಮುಂದುವರೆಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More