ಕೆಆರ್ಎಸ್ ಡ್ಯಾಮ್ಗೆ ಬಾಗಿನ ಅರ್ಪಣೆ ಹಿಂದಿದೆ ಇತಿಹಾಸ, ಅರ್ಚಕರು ನೀಡಿದ ಮಾಹಿತಿ ಇಲ್ಲಿದೆ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯ ಎರಡು ವರ್ಷಗಳ ನಂತರ ಭರ್ತಿಯಾಗಿದೆ. ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಬಾಗಿನ ಏಕೆ ಅರ್ಪಿಸುತ್ತಾರೆ ತಿಳಿದುಕೊಳ್ಳು, ಈ ವಿಡಿಯೋ ನೋಡಿ.
ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯ (KRS Dam) ಎರಡು ವರ್ಷಗಳ ನಂತರ ಭರ್ತಿಯಾಗಿದೆ. ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ ಅಭಿಜಿತ್ ಲಗ್ನದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಸಾಥ್ ನೀಡಿದರು.
ಜಲಾಯಶಯಕ್ಕೆ ಬಾಗಿನ ಏಕೆ ಅರ್ಪಿಸಬೇಕು ಎಂಬ ಪ್ರಶ್ನೆಗೆ ಅರ್ಚಕ ಬಾನುಪ್ರಕಾಶ್ ಶರ್ಮಾ ಉತ್ತರ ನೀಡಿದ್ದಾರೆ. ನದಿಗಳನ್ನು ತಾಯಿಯ ರೂಪದಲ್ಲಿ ಕಾಣುತ್ತೇವೆ. ಹೀಗಾಗಿ ಕೃತಜ್ಞತಾ ಭಾವದಿಂದ ಆಕೆಯನ್ನು ನಮಸ್ಕರಿಸಬೇಕು. ನದಿಗಳು ಮಾತೃ ಸ್ವರೂಪವಾಗಿರುವುದರಿಂದ ಬಾಗಿನ ಅರ್ಪಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಪ್ರವಾಹ ಭೀತಿ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ