ದೂರು ದಾಖಲಾದ ಮಾತ್ರಕ್ಕೆ ಯಡಿಯೂರಪ್ಪರನ್ನು ವಶಕ್ಕೆ ಪಡೆಯಲಾಗಲ್ಲ: ಜಿ ಪರಮೇಶ್ವರ್, ಗೃಹ ಸಚಿವ
ದೂರುದಾರರ ವಿಷಯದಲ್ಲಿ ಕೆಲವರು ಮಾನಸಿಕ ಅಸ್ವಸ್ಥೆ ಎನ್ನುತ್ತಾರೆ, ಬೇರೆ ಕೆಲವರು ಮತ್ತೊಂದು ಸಂಗತಿಯನ್ನು ಹೇಳುತ್ತಾರೆ, ದೂರನ್ನು ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿದೆಯೇ ಮೊದಲಾದ ಎಲ್ಲಾ ಅಂಶಗಳ ತನಿಖೆ ನಡೆಯಲಿದೆ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ಬಿಎಸ್ ಯಡಿಯೂರಪ್ಪನವರು (BS Yediyurappa) ನಾಡಿನ ಹಿರಿಯ ರಾಜಕಾರಣಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ಹಾಗಾಗಿ ಅವರ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಮುಂದುವರಿಯಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪೋಕ್ಸೋ ಕಾಯ್ದೆ (POCSO Act) ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾತಾಡಿದ ಸಚಿವ, ದೂರು ದಾಖಲಾದ ಕಾರಣ ಯಾರನ್ನೂ ವಶಕ್ಕೆ ಪಡೆದ ವಿಚಾರಣೆ ನಡೆಸಲ್ಲ, ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತದೆ, ದೂರಿನಲ್ಲಿರುವ ಅಂಶಗಳ ಸತ್ಯಾಸತ್ಯತೆಯನ್ನು ಅರಿಯುವ ಕೆಲಸವಾಗುತ್ತದೆ, ಅದಾದ ಬಳಿಕವೇ ಅಗತ್ಯ ಬಿದ್ದರೆ ಮಾತ್ರ ಯಡಿಯೂರಪ್ಪರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು. ದೂರುದಾರರ ವಿಷಯದಲ್ಲಿ ಕೆಲವರು ಮಾನಸಿಕ ಅಸ್ವಸ್ಥೆ ಎನ್ನುತ್ತಾರೆ, ಬೇರೆ ಕೆಲವರು ಮತ್ತೊಂದು ಸಂಗತಿಯನ್ನು ಹೇಳುತ್ತಾರೆ, ದೂರನ್ನು ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿದೆಯೇ ಮೊದಲಾದ ಎಲ್ಲಾ ಅಂಶಗಳ ತನಿಖೆ ನಡೆಯಲಿದೆ ಎಂದು ಪರಮೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಜೆಪಿ ಎರಡನೇ ಪಟ್ಟಿ: ವಿರೋಧಿಗಳಿಗೆ ಟಿಕೆಟ್ ತಪ್ಪಿಸುವಲ್ಲಿ ಬಿಎಸ್ ಯಡಿಯೂರಪ್ಪ ಮೇಲುಗೈ, ಸಂತೋಷ್ ಬಣಕ್ಕೆ ಅಲ್ಪ ಯಶಸ್ಸು