AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ

ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ

ಮಂಜುನಾಥ ಸಿ.
|

Updated on:Jun 20, 2024 | 8:02 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಕಲಾಪದ ಬಳಿಕ ಪವಿತ್ರಾ ಗೌಡ ಪರ ವಕೀಲರು ಮಾಧ್ಯಮಗಳ ಬಳಿ ಮಾತನಾಡಿದರು.

ರೇಣುಕಾ ಸ್ವಾಮಿ (Renuka swamy) ಕೊಲೆ ಪ್ರಕರಣದ ಆರೋಪಿ ನಂಬರ್ 1 ಪವಿತ್ರಾ ಗೌಡ ಅವರು 10 ದಿನದ ಪೊಲೀಸ್ ಕಸ್ಟಡಿಯ ಬಳಿಕ ಇಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಪವಿತ್ರಾ ಗೌಡ ಮತ್ತು ಇತರೆ ಹತ್ತು ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಬ್ಬರು ಆರೋಪಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಲಯದ ಕಲಾಪ ಮುಗಿದ ಬಳಿಕ ಟಿವಿ9 ಜೊತೆಗೆ ಮಾತನಾಡಿದ ಪವಿತ್ರಾ ಗೌಡ ಪರ ವಕೀಲರು, ತಮ್ಮ ಕಕ್ಷಿಧಾರರ ಪರವಾಗಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 20, 2024 07:58 PM