‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’: ನಿರ್ದೇಶಕಿ ಚಂದ್ರಕಲಾ
ನಟ ದರ್ಶನ್ ಮೇಲೆ ಕೊಲೆ ಆರೋಪ ಇದೆ. ರೇಣುಕಾ ಸ್ವಾಮಿ ಹತ್ಯೆ ಕೇಸ್ನಲ್ಲಿ ಅವರು ಎ2 ಆಗಿದ್ದಾರೆ. ಈ ಪ್ರಕರಣ ಬಹಿರಂಗ ಆದಾಗಿನಿಂದ ದರ್ಶನ್ ಮತ್ತು ಪವಿತ್ರಾ ಗೌಡ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಆದರೆ ರೇಣುಕಾ ಸ್ವಾಮಿ ಮಾಡಿದ ತಪ್ಪಿನ ಬಗ್ಗೆ ಅನೇಕರು ಮಾತನಾಡುತ್ತಿಲ್ಲ. ಆತ ಮಾಡಿದ್ದು ದೊಡ್ಡ ತಪ್ಪು ಎಂದು ನಿರ್ದೇಶಕಿ ಚಂದ್ರಕಲಾ ಅವರು ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ..
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲು ಸೇರಿದ್ದಾರೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ (Renuka Swamy) ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆ ಬಗ್ಗೆ ಬುದ್ಧಿ ಹೇಳಲು ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಪರಿಸ್ಥಿತಿ ಕೈ ಮೀರಿ ಆತನ ಹತ್ಯೆ ನಡೆದಿದೆ ಎಂಬ ಮಾಹಿತಿ ಇದೆ. ಈ ಕುರಿತು ‘ಆಶಿಕಿ 3’ ಸಿನಿಮಾ ನಿರ್ದೇಶಕಿ ಚಂದ್ರಕಲಾ ಅವರು ಪ್ರತಿಕ್ರಿಯಿಸಿದ್ದಾರೆ. ‘ರೇಣುಕಾ ಸ್ವಾಮಿ ಮಾಡಿದ್ದು ತುಂಬ ದೊಡ್ಡ ತಪ್ಪು. ಆದರೆ ಅದನ್ನು ಯಾರೂ ಗಮನಿಸುತ್ತಿಲ್ಲ. ಆ ರೀತಿಯ ಜನರು ಸಾಕಷ್ಟು ಮಂದಿ ಇದ್ದಾರೆ. ಫೇಕ್ ಅಕೌಂಟ್ಗಳ ಮೂಲಕ ಕೆಟ್ಟ ಕಮೆಂಟ್ ಹಾಕುತ್ತಾರೆ. ಅಂಥವರಿಗೆಲ್ಲ ಬುದ್ಧಿ ಬರಬೇಕು. ದರ್ಶನ್ ವಿಚಾರವೇ ಹೈಲೈಟ್ ಆಗುತ್ತಿರುವುದರಿಂದ ರೇಣುಕಾ ಸ್ವಾಮಿ ವಿಚಾರ ಹೈಲೈಟ್ ಆಗಿಲ್ಲ. ಒಟ್ಟಾರೆ ಪ್ರಕರಣವನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದು ಚಂದ್ರಕಲಾ (Director Chandrakala) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
