‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’: ನಿರ್ದೇಶಕಿ ಚಂದ್ರಕಲಾ

Edited By:

Updated on: Jul 02, 2024 | 8:26 PM

ನಟ ದರ್ಶನ್​ ಮೇಲೆ ಕೊಲೆ ಆರೋಪ ಇದೆ. ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ಅವರು ಎ2 ಆಗಿದ್ದಾರೆ. ಈ ಪ್ರಕರಣ ಬಹಿರಂಗ ಆದಾಗಿನಿಂದ ದರ್ಶನ್​ ಮತ್ತು ಪವಿತ್ರಾ ಗೌಡ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಆದರೆ ರೇಣುಕಾ ಸ್ವಾಮಿ ಮಾಡಿದ ತಪ್ಪಿನ ಬಗ್ಗೆ ಅನೇಕರು ಮಾತನಾಡುತ್ತಿಲ್ಲ. ಆತ ಮಾಡಿದ್ದು ದೊಡ್ಡ ತಪ್ಪು ಎಂದು ನಿರ್ದೇಶಕಿ ಚಂದ್ರಕಲಾ ಅವರು ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ..

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಪ್ರಕರಣದಲ್ಲಿ ನಟ ದರ್ಶನ್​ (Darshan) ಜೈಲು ಸೇರಿದ್ದಾರೆ. ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ (Renuka Swamy) ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆ ಬಗ್ಗೆ ಬುದ್ಧಿ ಹೇಳಲು ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಪರಿಸ್ಥಿತಿ ಕೈ ಮೀರಿ ಆತನ ಹತ್ಯೆ ನಡೆದಿದೆ ಎಂಬ ಮಾಹಿತಿ ಇದೆ. ಈ ಕುರಿತು ‘ಆಶಿಕಿ 3’ ಸಿನಿಮಾ ನಿರ್ದೇಶಕಿ ಚಂದ್ರಕಲಾ ಅವರು ಪ್ರತಿಕ್ರಿಯಿಸಿದ್ದಾರೆ. ‘ರೇಣುಕಾ ಸ್ವಾಮಿ ಮಾಡಿದ್ದು ತುಂಬ ದೊಡ್ಡ ತಪ್ಪು. ಆದರೆ ಅದನ್ನು ಯಾರೂ ಗಮನಿಸುತ್ತಿಲ್ಲ. ಆ ರೀತಿಯ ಜನರು ಸಾಕಷ್ಟು ಮಂದಿ ಇದ್ದಾರೆ. ಫೇಕ್​ ಅಕೌಂಟ್​ಗಳ ಮೂಲಕ ಕೆಟ್ಟ ಕಮೆಂಟ್​ ಹಾಕುತ್ತಾರೆ. ಅಂಥವರಿಗೆಲ್ಲ ಬುದ್ಧಿ ಬರಬೇಕು. ದರ್ಶನ್​ ವಿಚಾರವೇ ಹೈಲೈಟ್​ ಆಗುತ್ತಿರುವುದರಿಂದ ರೇಣುಕಾ ಸ್ವಾಮಿ ವಿಚಾರ ಹೈಲೈಟ್​ ಆಗಿಲ್ಲ. ಒಟ್ಟಾರೆ ಪ್ರಕರಣವನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದು ಚಂದ್ರಕಲಾ (Director Chandrakala) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More