ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂದು (ಜೂ.18) ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಪೊಲೀಸ್ ಠಾಣೆಗೆ ವೈದ್ಯರನ್ನು ಕರೆಸಲಾಯಿತು. ನಂತರ ಪವಿತ್ರಾ ಗೌಡ ಅವರನ್ನು ಪೊಲೀಸ್ ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ದರ್ಶನ್ ಸ್ನೇಹಿತೆ, ನಟಿ ಪವಿತ್ರಾ ಗೌಡ (Pavithra Gowda) ಕಳೆದ ಕೆಲವು ದಿನಗಳಿಂದ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ1 ಆರೋಪಿ. ಪ್ರತಿ ದಿನವೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದೆ. ಇಂದು (ಜೂನ್ 18) ಪೊಲೀಸ್ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಬಳಿಕ ಪವಿತ್ರಾ ಗೌಡ ಅವರನ್ನು ಪೊಲೀಸ್ ಸ್ಟೇಷನ್ನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್ ಮತ್ತು ಸಹಚರರು ರೇಣುಕಾ ಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ದರ್ಶನ್ (Darshan) ಎ2 ಆಗಿದ್ದಾರೆ. ಎಲ್ಲ ಪ್ರಮುಖ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಹಾಗೂ ರೇಣುಕಾ ಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

