ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್​

Updated on: Jun 18, 2024 | 5:58 PM

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂದು (ಜೂ.18) ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಪೊಲೀಸ್​ ಠಾಣೆಗೆ ವೈದ್ಯರನ್ನು ಕರೆಸಲಾಯಿತು. ನಂತರ ಪವಿತ್ರಾ ಗೌಡ ಅವರನ್ನು ಪೊಲೀಸ್​ ಠಾಣೆಯಿಂದ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ದರ್ಶನ್​ ಸ್ನೇಹಿತೆ, ನಟಿ ಪವಿತ್ರಾ ಗೌಡ (Pavithra Gowda) ಕಳೆದ ಕೆಲವು ದಿನಗಳಿಂದ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆರೋಪಿ. ಪ್ರತಿ ದಿನವೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದೆ. ಇಂದು (ಜೂನ್​ 18) ಪೊಲೀಸ್​ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಬಳಿಕ ಪವಿತ್ರಾ ಗೌಡ ಅವರನ್ನು ಪೊಲೀಸ್​ ಸ್ಟೇಷನ್​ನಿಂದ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಪವಿತ್ರಾ ಗೌಡ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್​ ಮತ್ತು ಸಹಚರರು ರೇಣುಕಾ ಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ದರ್ಶನ್​ (Darshan) ಎ2 ಆಗಿದ್ದಾರೆ. ಎಲ್ಲ ಪ್ರಮುಖ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಹಾಗೂ ರೇಣುಕಾ ಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More