AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..

ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jun 17, 2024 | 5:51 PM

Share

ದರ್ಶನ್​ ಜೊತೆ ಫೋಟೋ ತೆಗೆಸಿಕೊಳ್ಳಬೇಕು ಎಂಬ ಆಸೆಯಿಂದ ಚಿತ್ರದುರ್ಗದ ಅನು ಬೆಂಗಳೂರಿಗೆ ಬಂದಿದ್ದ. ಪಟ್ಟಣಗೆರೆ ಶೆಡ್​ ಬಳಿ ಹೋಗಿದ್ದ ಆತ ಈಗ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿದ್ದಾನೆ. ಆತನ ತಂದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆತನದ್ದು ತುಂಬ ಬಡ ಕುಟುಂಬ. ಮನೆಯ ಪರಿಸ್ಥಿತಿ ಬಹಳ ಹೀನಾಯವಾಗಿದೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿದೆ.

ನಟ ದರ್ಶನ್​ (Darshan) ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅಂಥವರಲ್ಲಿ ಕೆಲವರ ಪರಿಸ್ಥಿತಿ ಈಗ ಹೀನಾಯವಾಗಿದೆ. ದರ್ಶನ್​ರನ್ನು ನೋಡಬೇಕು ಎಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದಿದ್ದ ಅನು ಅಲಿಯಾಸ್​ ಅನುಕುಮಾರ್​ (Anukumar) ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ದರ್ಶನ್​ ಜೊತೆ ಫೋಟೋ ತೆಗೆಸಿಕೊಳ್ಳಬೇಕು ಎಂಬುದು ಅನುಕುಮಾರ್ ಆಸೆ ಆಗಿತ್ತು. ಆ ಕಾರಣಕ್ಕಾಗಿ ಆತ ಚಿತ್ರದುರ್ಗದಿಂದ ಪಟ್ಟಣಗೆರೆ ಶೆಡ್​ಗೆ ಬಂದಿದ್ದ. ಅಲ್ಲಿಯೇ ರೇಣುಕಾ ಸ್ವಾಮಿ ಹತ್ಯೆ (Renuka Swamy Murder) ನಡೆಯಿತು. ಈ ಕೇಸ್​ನಲ್ಲಿ ಹಲವರು ಆರೋಪಿಗಳಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಪೈಕಿ ಅನು ಮನೆಯ ಪರಿಸ್ಥಿತಿ ತೀರಾ ಹೀನಾಯವಾಗಿದೆ. ತುಂಬ ಬಡ ಕುಟುಂಬದ ಯುವಕನಾದ ಅನು ಬಾಳಿನಲ್ಲಿ ಈಗ ಅಂಧಕಾರ ಕವಿದಿದೆ. ಆತ ಅರೆಸ್ಟ್​ ಆಗುತ್ತಿದ್ದಂತೆಯೇ ತಂದೆ ಚಂದ್ರಣ್ಣ ಹೃದಯಾಘಾತದಿಂದ ನಿಧನರಾದರು. ಅನು ಮನೆಯಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More