ದರ್ಶನ್ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
Darshan Thoogudeepa Fans: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಮತ್ತು ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್ ಅನ್ನು ನೋಡಲು ಬಂದ ಅಭಿಮಾನಿಯೊಬ್ಬರು ಮಾಧ್ಯಮಗಳ ಬಳಿ ಮಾತನಾಡಿದ್ದಾರೆ.
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan Thoogudeep), ಪವಿತ್ರಾ ಗೌಡ ಇನ್ನೂ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ. ದರ್ಶನ್ ಅನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಅವರ ಅಭಿಮಾನಿಗಳು ಬರುತ್ತಲೇ ಇದ್ದಾರೆ. ದರ್ಶನ್ ಅನ್ನು ನೋಡಲು ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವುದಾಗಿ ಅಭಿಮಾನಿಗಳು ಹೇಳುತ್ತಿದ್ದಾರೆ. ಇಂದು (ಜೂನ್ 25) ದರ್ಶನ್ ಅನ್ನು ಕಾಣಲು ಬಂದ ಮಹಿಳಾ ಅಭಿಮಾನಿಯೊಬ್ಬರು ದರ್ಶನ್ ಬಗ್ಗೆ, ರೇಣುಕಾ ಸ್ವಾಮಿ ಪ್ರಕರಣದ ಬಗ್ಗೆ ಹೀಗೆ ಹೇಳಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos