ರೇಣುಕಾ ಸ್ವಾಮಿ ಕೊಲೆಯಾದ ಶೆಡ್ ಮಾಲೀಕ ಹೇಳಿದ್ದು ಹೀಗೆ
ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆ ಜಯಣ್ಣ ಅವರ ಶೆಡ್ನಲ್ಲಿ ಕೂಡಿ ಹಾಕಿ ದರ್ಶನ್ ಹಾಗೂ ಅವರ ಆಪ್ತರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಕೊಲೆ ನಡೆದ ಶೆಡ್ನ ಮಾಲೀಕ ಪಟ್ಟಣಗೆರೆ ಜಯಣ್ಣ ಮಾತನಾಡಿದ್ದಾರೆ.
ದರ್ಶನ್ (Darshan Thoogudeepa) ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಅವನ ಸಹಚರರು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ಚಿತ್ರದುರ್ಗದ ನಿವಾಸಿ ಆಗಿದ್ದ ರೇಣುಕಾ ಸ್ವಾಮಿಯನ್ನು ಅಲ್ಲಿಂದ ಅಪಹರಣ ಮಾಡಿ, ಬೆಂಗಳೂರಿನ ಹೊರವಲಯದ ಶೆಡ್ಗೆ ತಂದು ಅಲ್ಲಿ ಆತನ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ ಕೊಲ್ಲಲಾಗಿದೆ. ಇದೀಗ ಆ ಶೆಡ್ನ ಮಾಲೀಕ ಉದ್ಯಮಿ ಪಟ್ಟಣಗೆರೆ ಜಯಣ್ಣ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಆಪ್ತ ವಿನಯ್, ಪಟ್ಟಣಗೆರೆ ಜಯಣ್ಣ ಅವರ ಸಂಬಂಧಿಯೇ ಆಗಿದ್ದು ಈಗ ಅವರೂ ಸಹ ಬಂಧನಕ್ಕೆ ಒಳಗಾಗಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos