ರೇಣುಕಾ ಸ್ವಾಮಿ ಹತ್ಯೆ ಕೇಸ್; ಕೊಲೆ ಸ್ಪಾಟ್ನಲ್ಲಿ ಸಿಕ್ತಾ ಸ್ಟ್ರಾಂಗ್ ಎವಿಡನ್ಸ್?
ರೇಣುಕಾ ಸ್ವಾಮಿ (Renuka Swamy) ಕೊಲೆ ಮಾಡಿ ಆರೋಪದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ (Pavitra Gowda) ಸೇರಿ 13 ಜನರ ಬಂಧನವಾಗಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂದು(ಬುಧವಾರ) ಹತ್ಯೆ ನಡೆದ ಬೆಂಗಳೂರಿನ ರಾಜರಾಜೇಶ್ವರಿನಗರದ ಪಟ್ಟಣಗೆರೆ ಶೆಡ್ಗೆ ಆರೋಪಿಗಳನ್ನು ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ಬೆಂಗಳೂರು, ಜೂ.12: ರೇಣುಕಾ ಸ್ವಾಮಿ (Renuka Swamy) ಕೊಲೆ ಮಾಡಿ ಆರೋಪದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ (Pavitra Gowda) ಸೇರಿ 13 ಜನರ ಬಂಧನವಾಗಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಇಂದು(ಬುಧವಾರ) ಹತ್ಯೆ ನಡೆದ ಬೆಂಗಳೂರಿನ ರಾಜರಾಜೇಶ್ವರಿನಗರದ ಪಟ್ಟಣಗೆರೆ ಶೆಡ್ಗೆ ಆರೋಪಿಗಳನ್ನು ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಕೊಲೆಗೈದ ಜಾಗ ಯಾವುದು, ಪಟ್ಟಣಗೆರೆ ಶೆಡ್ಗೆ ಎಷ್ಟು ಗಂಟೆಗೆ ಬಂದಿದ್ದರು, ರೇಣುಕಾಸ್ವಾಮಿ ಹತ್ಯೆಗೆ ಬಳಸಿದ ವಸ್ತುಗಳು ಯಾವುದು ಎಂದು ಪ್ರತಿಯೊಬ್ಬ ಆರೋಪಿಯಿಂದ ಮಾಹಿತಿ ಪಡೆದು ಹೇಳಿಕೆ ದಾಖಲು ಮಾಡಿಕೊಂಡರು. ಈ ವೇಳೆ ಪೊಲೀಸರಿಗೆ ರಾಡ್ ಸೇರಿದಂತೆ ಕೆಲ ವಸ್ತುಗಳು ಸಿಕ್ಕಿದ್ದು, ಅದರಿಂದಲೇ ಹತ್ಯೆ ಮಾಡಿದ್ರಾ ಎಂಬುದು ತನಿಖೆ ಬಳಿಕ ತಿಳಿಯಬೇಕಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

