ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಪ್ರತಿವರ್ಷ 60 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಭೇಟಿ ನೀಡುತ್ತಾರೆ!
ಸಂತಾನ ಪ್ರಾಪ್ತಿ ಬಯಸುವವರು ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಗುಡಿಯಲ್ಲಿರುವ ಪರಶುರಾಮನ ತೊಟ್ಟಿಲು ತೂಗಿದರೆ ಮಕ್ಕಳಿಲ್ಲದ ದಂಪತಿಗಳಿಗೆ ಮಕ್ಕಳಾಗುತ್ತವೆ ಎಂಬ ಪ್ರತೀತಿ ಇದೆ.
ಕನ್ನಡಿಗರಿಗೆಲ್ಲ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಬಗ್ಗೆ ಗೊತ್ತಿದೆ. ದಕ್ಷಿಣ ಭಾರತದ ಪ್ರಮುಖ ಮತ್ತು ಪ್ರಸಿದ್ಧ ದೇವಸ್ಥಾನವಾಗಿರುವ ಯಲ್ಲಮ್ಮನ ಸನ್ನಿಧಿಗೆ ಪ್ರತಿವರ್ಷ ಕರ್ನಾಟಕವಲ್ಲದೆ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಏನಿಲ್ಲವೆಂದರೂ 60 ಲಕ್ಷ ಭಕ್ತಾದಿಗಳು ಬಂದು ತಮ್ಮ ಹರಕೆಗಳನ್ನು ಸಮರ್ಪಿಸಿ ಪುನೀತರಾಗುವ ಮಾಹಿತಿ ಬೆರಗು ಮೂಡಿಸುತ್ತದೆ. ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿರುವ ರೇಣುಕಾ ಯಲ್ಲಮ್ಮನ ದೇವಸ್ಥಾನ ವರ್ಷವಿಡೀ ತೆರೆದಿರುತ್ತದೆ. ನಿಮಗೆ ಆಶ್ಚರ್ಯವಾಗಬಹುದು, ಬೆಳಗ್ಗೆ 4 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಅರಂಭಗೊಳ್ಳುತ್ತವೆ.
ಮೂರು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ವಿಶೇಷ ಪೂಜೆಗಳು ನಡೆಯುತ್ತವೆ.
ಜಮದಗ್ನಿ ಮಹಾಋಷಿಯ ಪತ್ನಿ ರೇಣುಕಾದೇವಿಯೇ ಇಲ್ಲಿ ಯಲ್ಲಮ್ಮನಾಗಿ ಪ್ರತಿಷ್ಠಾಪನೆಗೊಂಡಿದ್ದಾಳೆ ಎಂಬ ಐತಿಹ್ಯವಿದೆ.
ಸಂತಾನ ಪ್ರಾಪ್ತಿ ಬಯಸುವವರು ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಗುಡಿಯಲ್ಲಿರುವ ಪರಶುರಾಮನ ತೊಟ್ಟಿಲು ತೂಗಿದರೆ ಮಕ್ಕಳಿಲ್ಲದ ದಂಪತಿಗಳಿಗೆ ಮಕ್ಕಳಾಗುತ್ತವೆ ಎಂಬ ಪ್ರತೀತಿ ಇದೆ.
ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಪ್ಪಟ ಜಾನಪದ ಹಿನ್ನೆಲೆಯ ಗುಡಿ. ದೇವಿಯ ಜಾನಪದ ಹಾಡುಗಳು ಈ ಭಾಗದಲ್ಲಿ ಬಹಳ ಜನಪ್ರಿಯ. ಸುಕ್ಷೇತ್ರ ಯಲ್ಲಮ್ಮ ಗುಡ್ಡದಲ್ಲಿ ಪ್ರತಿವರ್ಷ ಬನದ ಹುಣ್ಣಿಮೆ ಜಾತ್ರೆಯಾಗುತ್ತದೆ. ಬನದ ಹುಣ್ಣಿಮೆ ಮತ್ತು ಭರತ ಹುಣ್ಣಿಮೆ ಸಂದರ್ಭಗಳಲ್ಲಿ ದೇವಿ ದರ್ಶನಕ್ಕೆ ಬರುವ ಜನ 2-3 ದಿನಗಳ ಕಾಲ ಗುಡ್ಡದಲ್ಲೇ ಉಳಿದು ತಮ್ಮ ತಮ್ಮ ಹರಕೆಗಳನ್ನು ತೀರಿಸಿಕೊಂಡು ಹೋಗುತ್ತಾರೆ.
ಇದನ್ನೂ ಓದಿ: Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!