ತನಗೇ ವೋಟ್ ಹಾಕಬೇಕೆಂದು ಮತದಾರರಿಂದ ಆಣೆ ಪ್ರಮಾಣ ಮಾಡಿಸಿದ ರೇಣುಕಾಚಾರ್ಯ; ವೈರಲ್ ಆದ ವಿಡಿಯೋ ಇಲ್ಲಿದೆ

ಬೊಮ್ಮಾಯಿ ಸರ್ಕಾರ 1 ಲಕ್ಷ ಕೊವಿಡ್ ಪರಿಹಾರ ನೀಡುತ್ತಿದೆ. ನಾನು ನಿಮಗೆ 10 ಸಾವಿರ ವೈಯಕ್ತಿಕ ಹಣ ನೀಡುತ್ತಿದ್ದೇನೆ. ನೀವು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕು.

TV9kannada Web Team

| Edited By: sandhya thejappa

Jan 02, 2022 | 11:42 AM

ದಾವಣಗೆರೆ: ಚುನಾವಣೆಯಲ್ಲಿ ತನಗೇ ವೋಟ್ ಹಾಕಬೇಕೆಂದು ಹೊನ್ನಾಳಿ ತಾಲೂಕಿನ ಬಿಜೆಪಿ ಶಾಸಕ ರೇಣುಕಾಚಾರ್ಯ ಮತದಾರರಿಂದ ಆಣೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ವೋಟ್ ಹಾಕುವುದಾಗಿ ಎರಡು ಕೈ ಎತ್ತಿ ಹೇಳಿ ಅಂತ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಬೊಮ್ಮಾಯಿ ಸರ್ಕಾರ 1 ಲಕ್ಷ ಕೊವಿಡ್ ಪರಿಹಾರ ನೀಡುತ್ತಿದೆ. ನಾನು ನಿಮಗೆ 10 ಸಾವಿರ ವೈಯಕ್ತಿಕ ಹಣ ನೀಡುತ್ತಿದ್ದೇನೆ. ನೀವು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕು. ನಿಮ್ಮ ಊರಿನಲ್ಲಿ ಎಲ್ಲರಿಗೂ ಹೇಳಿ ಅಂತ ಮತದಾರರ ಬಳಿ ಆಣೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ರೇಣುಕಾಚಾರ್ಯ ಆಣೆ ಪ್ರಮಾಣ ಮಾಡಿಸುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ

ನಮ್ಮ ಪಕ್ಷದವರೇ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ; ಸ್ವಪಕ್ಷದ ಮುಖಂಡರ ವಿರುದ್ಧ ಎಂಪಿ ಕುಮಾರಸ್ವಾಮಿ ಗರಂ

ಹೋಮ-ಹವನ ವಿಶೇಷ ಪೂಜೆ ಮೂಲಕ ತಮ್ಮ ನೆಚ್ಚಿನ ಕೋತಿ ಚಿಂಟು 2ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡಿದ ಸಾ.ರಾ.ಮಹೇಶ್

Follow us on

Click on your DTH Provider to Add TV9 Kannada