ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​

Updated on: Dec 18, 2024 | 9:53 PM

ಕೊಲೆ ಕೇಸ್​ನಲ್ಲಿ ಜಾಮೀನು ಸಿಕ್ಕರೂ ಕೂಡ ಇಷ್ಟು ದಿನ ಜಗದೀಶ್​ಗೆ ಶ್ಯೂರಿಟಿ ಸಿಕ್ಕಿರಲಿಲ್ಲ. ಹಾಗಾಗಿ ಜಾಮೀನು ಸಿಕ್ಕು 6 ದಿನ ಕಳೆದವರೆಗೂ ಜೈಲಲ್ಲೇ ಜಗದೀಶ್ ಕಾಲ ಕಳೆಯಬೇಕಾಯಿತು. ಇಂದು (ಡಿ.18) ಜಗದೀಶ್​ನ ಬಿಡುಗಡೆ ಮಾಡಲಾಯಿತು. ಅವರ ಸಹೋದರಿ ಬಂದು ಕಾರಿನಲ್ಲಿ ಕರೆದುಕೊಂಡು ಹೋದರು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ 6ನೇ ಆರೋಪಿ ಜಗದೀಶ್​ ರಿಲೀಸ್ ಆಗಿದ್ದಾರೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಜಗದೀಶ್ ಬಿಡುಗಡೆ ಆಗಿದೆ. ಆಗಸ್ಟ್ 29ರಂದು ಶಿವಮೊಗ್ಗ ಜೈಲಿಗೆ ಜಗದೀಶ್​ನನ್ನು ಸ್ಥಳಾಂತರ ಮಾಡಲಾಗಿತ್ತು. ಇತ್ತೀಚೆಗೆ ಜಗದೀಶ್​ಗೆ ಜಾಮೀನು ನೀಡಲಾಗಿತ್ತು. ಶ್ಯೂರಿಟಿ ಸಿಗದ ಹಿನ್ನೆಲೆ ರಿಲೀಸ್ ವಿಳಂಬವಾಗಿತ್ತು. 6 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More