ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್

Edited By:

Updated on: Nov 08, 2026 | 5:49 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿಸಾಕ್ಷಿ ಆಗಿರುವ ಪ್ರದೋಷ್ ರಾವ್​ಗೆ ಪಿತೃಕಾರ್ಯದಲ್ಲಿ ಭಾಗವಹಿಸಲು ನ್ಯಾಯಾಲಯ ಸೀಮಿತ ಅನುಮತಿ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಪಿತೃಕಾರ್ಯದಲ್ಲಿ ಭಾಗವಹಿಸುವವರ ಪಟ್ಟಿ ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ಆಪ್ತರು, ಪುರೋಹಿತರಿಗೆ ಮಾತ್ರ ಅವಕಾಶ ಎಂದು ಹೇಳಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿಸಾಕ್ಷಿ ಆಗಿರುವ ಪ್ರದೋಷ್ ರಾವ್​ಗೆ ಪಿತೃಕಾರ್ಯದಲ್ಲಿ ಭಾಗವಹಿಸಲು ನ್ಯಾಯಾಲಯ ಸೀಮಿತ ಅನುಮತಿ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಪಿತೃಕಾರ್ಯದಲ್ಲಿ ಭಾಗವಹಿಸುವವರ ಪಟ್ಟಿ ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ಆಪ್ತರು, ಪುರೋಹಿತರಿಗೆ ಮಾತ್ರ ಅವಕಾಶ ಎಂದು ಹೇಳಲಾಗಿದೆ. ಆದರೆ ಸಂಬಂಧಿಕರು, ಸ್ನೇಹಿತರ ಉಪಸ್ಥಿತಿಗೆ ದರ್ಶನ್ ವಕೀಲರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಕ್ಷೇಪ ಪರಿಗಣಿಸಿದ 59ನೇ ಸಿಸಿಹೆಚ್ ನ್ಯಾಯಾಲಯವು ಕುಟುಂಬದ ಸದಸ್ಯರು, ಪುರೋಹಿತರು ಹಾಗೂ ಮನೆಯ ಕೆಲಸದವರು ಭಾಗವಹಿಸಬಹುದು ಎಂದು ಅನುಮತಿ ನೀಡಿದೆ. ಸ್ನೇಹಿತರ ಉಪಸ್ಥಿತಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ಹೈಕೋರ್ಟ್ ಆದೇಶ ಪಾಲನೆಗೆ ಜೈಲು ಅಧಿಕಾರಿಗಳು, ಸಿಎಆರ್ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More