ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು

Edited By:

Updated on: Sep 08, 2026 | 8:37 PM

ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮರು ಆದೇಶ ಹೊರಡಿಸಲು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಬಗ್ಗೆ ನಟ ದರ್ಶನ್ ಪರ ವಕೀಲರಾದ ನಾಸಿರ್ ಅಲಿ ಅವರು ವಿವರ ನೀಡಿದ್ದಾರೆ. ವಿಚಾರಣೆ ನಡೆದ ರೀತಿಯ ಬಗ್ಗೆ ಅವರು ಮಾತನಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿ ಆಗಿರುವುದನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆದಿದ್ದು, ಇಂದು (ಸೆಪ್ಟೆಂಬರ್ 8) ಆದೇಶ ಪ್ರಕಟ ಆಗಿದೆ. ಒಂದು ವಾರದಲ್ಲಿ ಮರು ಆದೇಶ ಹೊರಡಿಸಲು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಬಗ್ಗೆ ದರ್ಶನ್ ಪರ ವಕೀಲರಾದ ನಾಸಿರ್ ಅಲಿ ಅವರು ವಿವರ ನೀಡಿದ್ದಾರೆ. ದರ್ಶನ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಏನಿತ್ತು? ನ್ಯಾಯಾಲಯದಲ್ಲಿ ಯಾವ ರೀತಿ ವಿಚಾರಣೆ ನಡೆಯಿತು? ದರ್ಶನ್ ಅವರ ಮುಂದಿನ ಮನವಿ ಏನು ಎಂಬಿತ್ಯಾದಿ ಪ್ರಶ್ನೆಗಳಿಗೆ ವಕೀಲರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More