ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದವರ ಮೇಲೂ ಕ್ರಮ? ತನಿಖೆ ಬಗ್ಗೆ ಮಾಹಿತಿ ನೀಡಿದ ಕಮಿಷನರ್
ನಟ ದರ್ಶನ್ ಅವರ ಜೈಲು ವಾಸ ಮುಂದುವರಿದಿದೆ. ಕೊಲೆ ಆರೋಪದಲ್ಲಿ ಜೈಲು ಸೇರಿರುವ ಅವರನ್ನು ಭೇಟಿ ಮಾಡಲು ಈಗಾಗಲೇ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಆ ಪೈಕಿ ಕೆಲವರಿಗೆ ಸಂಕಷ್ಟ ಕಾದಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..
ಚಿತ್ರರಂಗದಲ್ಲಿ ದರ್ಶನ್ ಅವರಿಗೆ ಅನೇಕ ಆಪ್ತರು ಇದ್ದಾರೆ. ಆ ಪೈಕಿ ಕೆಲವರು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಆರೋಪ ದರ್ಶನ್ ಮೇಲಿದೆ. ಇದೇ ಪ್ರಕರಣದಲ್ಲಿ ಚಿಕ್ಕಣ್ಣ ಮುಂತಾದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಕೇಸ್ನಲ್ಲಿ ಸಾಕ್ಷಿಯಾಗಿ ಹೇಳಿಕೆ ನೀಡಿರುವವರು ಕೂಡ ದರ್ಶನ್ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಆ ವಿಷಯ ನಮ್ಮ ಪರಿಶೀಲನೆಯಲ್ಲಿದೆ. ಕಾನೂನಾತ್ಮಕವಾಗಿ ಪರಿಶೀಲಿಸಿ ಆ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಯಾವ ರೀತಿ ಮಾಡುತ್ತೇವೆ ಎಂಬುದನ್ನು ಇಲ್ಲಿ ಹೇಳುವುದು ಕಷ್ಟ’ ಎಂದಿದ್ದಾರೆ ದಯಾನಂದ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos