ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್

ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್

ಮದನ್​ ಕುಮಾರ್​
|

Updated on: Sep 04, 2024 | 5:25 PM

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಬೆಂಗಳೂರು ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಇಂದು (ಸೆಪ್ಟೆಂಬರ್ 4) ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಅವರ ತಂದೆ ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಜಾಮೀನು ಸಿಗುತ್ತೋ ಇಲ್ಲವೋ ಎಂಬ ಟೆನ್ಷನ್​ ಅವರಿಗೆ ಹೆಚ್ಚಾಗಿದೆ.

ನಟ ದರ್ಶನ್​ ವಿರುದ್ಧ ಸಾವಿರಾರು ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಎ2 ಆಗಿ ಮುಂದುವರಿದಿದ್ದಾರೆ. ಚಾರ್ಜ್​ಶೀಟ್​ ಸಲ್ಲಿಕೆ ಆಗುತ್ತಿದ್ದಂತೆಯೇ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ಜಾರ್ಜ್​ಶೀಟ್​ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಅದರ ಪ್ರತಿ ಸಿಗುವುದು ತಡವಾಗುತ್ತದೆ ಅಂತ ಅಧಿಕಾರಿಗಳು ನಮಗೆ ಹೇಳಿದ್ದಾರೆ. ಸಿಕ್ಕ ಬಳಿಕ ಅದರಲ್ಲಿ ಏನಿದೆ ಅಂತ ತಿಳಿದುಕೊಂಡು ಮಾತನಾಡುತ್ತೇನೆ’ ಎಂದು ರೇಣುಕಾಸ್ವಾಮಿ ತಂದೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.