ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ ಇಲ್ಲಿದೆ
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿಗಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಎ1 ಪವಿತ್ರಾ ಗೌಡ ಅವರಿಗೂ ಜಾಮೀನು ನಿರಾಕರಣೆ ಮಾಡಲಾಗಿದೆ. ಕೋರ್ಟ್ ಆದೇಶ ಬಂದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಎದುರು ಅವರು ಭಾವುಕರಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ..
‘ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ. ಕಾನೂನು ಹೋರಾಟ ಸರಿಯಾದ ರೀತಿಯಲ್ಲಿ ಸಾಗುತ್ತಿದೆ. ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಸಮರ್ಥವಾಗಿ ಕೇಸ್ ನಡೆಸುತ್ತಿದ್ದಾರೆ. ಆದ್ದರಿಂದಲೇ ಇಂಥ ತೀರ್ಮಾನ ಬಂದಿದೆ. ಪೊಲೀಸರು ಕೂಡ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿನಿಂದಲೂ ನಮಗೆ ಅವರ ಬಗ್ಗೆ ಗೌರವ ಮತ್ತು ನಂಬಿಕೆ ಇದೆ. ಅವರ ಕರ್ತವ್ಯಕ್ಕೆ ನಾವು ಧನ್ಯವಾದ ಅರ್ಪಿಸುತ್ತೇವೆ’ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

