ದರ್ಶನ್ ನಮ್ಮನ್ನು ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ

Updated on: Jun 08, 2025 | 1:38 PM

ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಜಾಮೀನು ಪಡೆದು ಹೊರಗೆ ಬಂದ ನಂತರ ರೇಣುಕಾಸ್ವಾಮಿ ಕುಟುಂಬ ಮೌನವಾಗಿದೆಯಾ ಎಂಬ ಪ್ರಶ್ನೆ ಎದುರಾಗಿದೆ. ಈ ಕುರಿತು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಮಾತನಾಡಿದ್ದಾರೆ. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಜಾಮೀನು ಪಡೆದು ದರ್ಶನ್ (Darshan) ಹೊರಬಂದ ಬಳಿಕ ರೇಣುಕಾಸ್ವಾಮಿ (Renukaswamy) ಕುಟುಂಬ ಮೌನವಾಗಿದೆಯಾ ಎಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ರೇಣುಕಾಸ್ವಾಮಿ ತಂದೆ (Renukaswamy Father) ಕಾಶಿನಾಥಯ್ಯ ಅವರು ಮಾತನಾಡಿದ್ದಾರೆ. ‘ನಾವು ಮೌನ ವಹಿಸಿಲ್ಲ. ಕಾನೂನಿಗೆ ಅದರದ್ದೇ ಆದ ಕ್ರಮ ಇರುತ್ತದೆ. ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗೆ ಇದೆ. ಜಾಮೀನು ವಿಷಯದಲ್ಲಿ ಈ ಪ್ರಕರಣ ಸುಪ್ರೀಂ ಕೋರ್ಟ್ ತನಕ ಹೋಗಿದೆ. ದರ್ಶನ್ ಹೊರಗಡೆ ಬಂದ ಬಳಿಕ ನಮ್ಮನ್ನು ಸಂಪರ್ಕ ಮಾಡಿಲ್ಲ. ಅವರು ನಮ್ಮನ್ನು ಸಂಪರ್ಕ ಮಾಡುತ್ತಾರೆ ಎಂಬ ನಂಬಿಕೆ ಇಲ್ಲ. ಕಾನೂನಿನ ದೃಷ್ಟಿಯಿಂದ ಅವರು ಈ ರೀತಿ ವಿಚಾರ ಮಾಡಿರಬಹುದು. ಒಂದು ವೇಳೆ ಸಂಪರ್ಕಿಸಲು ಬಂದರೆ ಆ ಬಗ್ಗೆ ನಮ್ಮ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಕಾಶಿನಾಥಯ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More