ದರ್ಶನ್ ಭೇಟಿ ಮಾಡಲು ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ಇಲ್ಲಿದೆ..
ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ಅವರು ಜಾಮೀನು ಪಡೆದ ನಂತರ ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ರೇಣುಕಾಸ್ವಾಮಿ ಪೋಷಕರನ್ನು ಕೂಡ ಅವರು ಭೇಟಿ ಮಾಡುತ್ತಾರಾ ಎಂಬ ಪ್ರಶ್ನೆ ಕೆಲವರಲ್ಲಿ ಮೂಡಿದೆ. ಈ ಕುರಿತು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಕುಟುಂಬದವರನ್ನು ದರ್ಶನ್ ಭೇಟಿ ಮಾಡಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿದೆ. ಆ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದಾರೆ. ‘ಫೇಸ್ಬುಕ್ ಎಂದರೆ ಏನು ಅಂತ ನಮಗೆ ತಿಳಿದಿಲ್ಲ. ಯಾರೂ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಮಗೆ ಈಗಾಗಲೇ ನೋವು ಆಗಿದೆ. ದರ್ಶನ್ ಭೇಟಿ ಮಾಡಲು ಬಂದರೆ ಆ ಬಗ್ಗೆ ನಾನು ವೈಯಕ್ತಿಕ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮ್ಮ ಹಿತೈಷಿಗಳು ಹಾಗೂ ಬಂಧುಗಳು ತೀರ್ಮಾನ ಮಾಡುತ್ತಾರೆ’ ಎಂದು ಕಾಶಿನಾಥಯ್ಯ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?

Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ

Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?

ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
