ದರ್ಶನ್ ಭೇಟಿ ಮಾಡಲು ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ಇಲ್ಲಿದೆ..

Updated on: Jan 16, 2025 | 9:17 PM

ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ಅವರು ಜಾಮೀನು ಪಡೆದ ನಂತರ ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ರೇಣುಕಾಸ್ವಾಮಿ ಪೋಷಕರನ್ನು ಕೂಡ ಅವರು ಭೇಟಿ ಮಾಡುತ್ತಾರಾ ಎಂಬ ಪ್ರಶ್ನೆ ಕೆಲವರಲ್ಲಿ ಮೂಡಿದೆ. ಈ ಕುರಿತು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರೇಣುಕಾಸ್ವಾಮಿ ಕುಟುಂಬದವರನ್ನು ದರ್ಶನ್ ಭೇಟಿ ಮಾಡಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿದೆ. ಆ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದಾರೆ. ‘ಫೇಸ್​ಬುಕ್ ಎಂದರೆ ಏನು ಅಂತ ನಮಗೆ ತಿಳಿದಿಲ್ಲ. ಯಾರೂ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಮಗೆ ಈಗಾಗಲೇ ನೋವು ಆಗಿದೆ. ದರ್ಶನ್ ಭೇಟಿ ಮಾಡಲು ಬಂದರೆ ಆ ಬಗ್ಗೆ ನಾನು ವೈಯಕ್ತಿಕ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮ್ಮ ಹಿತೈಷಿಗಳು ಹಾಗೂ ಬಂಧುಗಳು ತೀರ್ಮಾನ ಮಾಡುತ್ತಾರೆ’ ಎಂದು ಕಾಶಿನಾಥಯ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More