ನರಕಯಾತನೆ ಅನುಭವಿಸುತ್ತಿದ್ದ ದರ್ಶನ್ ಗೆ ಕೊನೆಗೂ ಸಿಕ್ತು ಈ ಸೌಲಭ್ಯಗಳು
ನಟ ದರ್ಶನ್ ಆ್ಯಂಡ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಜಾ ಮಾಡಿದೆ.ಇದರಿಂದಾಗಿ ದರ್ಶನ್ ಆ್ಯಂಡ್ ಗ್ಯಾಂಗ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯಲಿದೆ. ಇನ್ನು ದರ್ಶನ್ ಗೆ ಕನಿಷ್ಠ ಮೂಲಸೌಕರ್ಯಗಳನ್ನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸಹ ಕೋರ್ಟ್ ಮಾನ್ಯ ಮಾಡಿದೆ.
ಬೆಂಗಳೂರು, (ಸೆಪ್ಟೆಂಬರ್ 09): ನಟ ದರ್ಶನ್ ಆ್ಯಂಡ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಜಾ ಮಾಡಿದೆ.ಇದರಿಂದಾಗಿ ದರ್ಶನ್ ಆ್ಯಂಡ್ ಗ್ಯಾಂಗ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯಲಿದೆ. ಇನ್ನು ದರ್ಶನ್ ಗೆ ಕನಿಷ್ಠ ಮೂಲಸೌಕರ್ಯಗಳನ್ನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸಹ ಕೋರ್ಟ್ ಮಾನ್ಯ ಮಾಡಿದ್ದು, ಜೈಲು ಮ್ಯಾನುಯಲ್ ಪ್ರಕಾರ ಏನೆಲ್ಲಾ ಸೌಲಭ್ಯ ಕೊಡಬೇಕು ಅದನ್ನು ನೀಡಿ ಎಂದು ಕೋರ್ಟ್ ಆದೇಶಿಸಿದೆ. ಅಂದರೆ ಜೈಲಿನೊಳಗೆ ಓಡಾಡಲು, ಹಾಸಿಗೆ ದಿಂಬು ನೀಡಲು ಕೋರ್ಟ್ ಸೂಚಿಸಿದೆ.

