ಪ್ರದೋಷ್ ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಸೆಪ್ಟೆಂಬರ್ 2ರಂದು ಮಾಫಿ ಸಾಕ್ಷಿಯಾಗಿ ಪ್ರದೋಷ್ ವಿಚಾರಣೆ ಇರುವುದರಿಂದ ಇಂದು (ಸೆಪ್ಟೆಂಬರ್ 1) ತುರ್ತಾಗಿ ತಮ್ಮ ಅರ್ಜಿ ವಿಚಾರಣೆ ಮಾಡಬೇಕು ಎಂದು ದರ್ಶನ್ ಪರ ವಕೀಲರು ಮಾಡಿದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಇಂದೇ ವಿಚಾರಣೆ ನಡೆಸಲು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಮ್ಮತಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ14 ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ವಿಚಾರಣಾ ನ್ಯಾಯಾಲಯ ಅನುಮತಿ ನೀಡಿದೆ. ಆದರೆ ಈ ಆದೇಶವನ್ನು ಪ್ರಶ್ನಿಸಿ ದರ್ಶನ್ (Darshan) ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದೇಶದ ಪ್ರಕ್ರಿಯೆಯಲ್ಲಿ ಲೋಪದೋಷಗಳಿವೆ ಎಂದು ಹೈಕೋರ್ಟ್ ಮೆಟ್ಟಿಲು ಏರಲಾಗಿದೆ. ಸೆಪ್ಟೆಂಬರ್ 2ರಂದು ಮಾಫಿ ಸಾಕ್ಷಿಯಾಗಿ ಪ್ರದೋಷ್ ವಿಚಾರಣೆ ಇರುವುದರಿಂದ ಇಂದು (ಸೆಪ್ಟೆಂಬರ್ 1) ತುರ್ತಾಗಿ ತಮ್ಮ ಅರ್ಜಿ ವಿಚಾರಣೆ ಮಾಡಬೇಕು ಎಂದು ದರ್ಶನ್ ಪರವಾಗಿ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಮಾಡಿದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಇಂದೇ ವಿಚಾರಣೆ ನಡೆಸಲು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಮ್ಮತಿಸಿದೆ. ಹೈಕೋರ್ಟ್ ನೀಡಲಿರುವ ತೀರ್ಪಿನ ಬಗ್ಗೆ ಭಾರಿ ಕುತೂಹಲ ನಿರ್ಮಾಣ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

