ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ

Edited By:

Updated on: Nov 24, 2026 | 11:31 AM

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಸಹೋದರನ ವಿವಾಹಕ್ಕೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿ, ಕಾಮಾಕ್ಷಿಪಾಳ್ಯ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿದೆ.

ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಕೀಲರು, ಡಿಸೆಂಬರ್ 12 ಮತ್ತು 13ರಂದು ಪವಿತ್ರಾಗೌಡ ಅವರ ಸಹೋದರನ ವಿವಾಹ ನಿಗದಿಯಾಗಿದೆ. ಸಹೋದರನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅವರಿಗೆ ಮಧ್ಯಂತರ ಜಾಮೀನು ಅಗತ್ಯವಿದೆ. ಹಾಗಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದರು.

ಮನವಿಯನ್ನು ಆಲಿಸಿದ ಹೈಕೋರ್ಟ್, ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಅಥವಾ ಮಾಹಿತಿ ಸಲ್ಲಿಸಲು ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More