Video: ರೇಣುಕಾಸ್ವಾಮಿ ಕೊಲೆ:ದೇವಸ್ಥಾನಗಳ ಎಷ್ಟೇ ಸುತ್ತಿದ್ರೂ ಪವಿತ್ರಾಗೆ ಸಿಗಲಿಲ್ಲ ಜಾಮೀನು
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಎಷ್ಟೇ ದೇವಸ್ಥಾನಗಳನ್ನು ಸುತ್ತಿದರೂ ಇಂದು ಪವಿತ್ರಾಗೆ ಜಾಮೀನು ಸಿಗಲಿಲ್ಲ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದಲ್ಲಿನ ಲೋಪಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರ್ಟ್ ಆದೇಶಿಸಿದೆ.
ಬೆಂಗಳೂರು, ಆಗಸ್ಟ್ 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್(Darshan) ಹಾಗೂ ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಎಷ್ಟೇ ದೇವಸ್ಥಾನಗಳನ್ನು ಸುತ್ತಿದರೂ ಇಂದು ಪವಿತ್ರಾಗೆ ಜಾಮೀನು ಸಿಗಲಿಲ್ಲ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದಲ್ಲಿನ ಲೋಪಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಈ ತೀರ್ಪಿನಿಂದ ದರ್ಶನ್ ಮತ್ತೆ ಜೈಲಿಗೆ ಹೋಗುವ ಸಾಧ್ಯತೆ ಇದೆ. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಕೂಡ ಈ ತೀರ್ಪಿನಿಂದ ಪ್ರಭಾವಿತರಾಗಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಂಗದ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 14, 2025 11:59 AM
