ರೇಣುಕಾಸ್ವಾಮಿ ಕೊಲೆ ಕೇಸ್​: ದರ್ಶನ್​ ಭಾವಚಿತ್ರವನ್ನು ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ರೇಣುಕಾಸ್ವಾಮಿ ಕೊಲೆ ಕೇಸ್​: ದರ್ಶನ್​ ಭಾವಚಿತ್ರವನ್ನು ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 12, 2024 | 4:21 PM

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಬಂಧನಕ್ಕೊಳಗಾಗಿರೋ ದರ್ಶನ್ ಆ್ಯಂಡ್ ಗ್ಯಾಂಗ್ ವಿಚಾರಣೆ ಮುಂದುವರಿದಿದೆ. ದರ್ಶನ್ ಸೇರಿ ಹಲವು ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೊಲೆ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ, ಜೂನ್​ 12: ನಟ ದರ್ಶನ (Darshan) ಹಾಗೂ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಈಗಾಗಲೇ ದರ್ಶನ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಕೂಡ ಚುರುಕಾಗಿ ನಡೆದಿದೆ. ದರ್ಶನ ಹಾಗೂ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಚಿತ್ರದುರ್ಗದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಾಲಯದಿಂದ ಡಿಸಿ ಕಚೇರಿವರೆಗೂ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಬೆಂಕಿ ಹಚ್ಚಿ ಆಕ್ರೋಶ‌ ವ್ಯಕ್ತಪಡಿಸಿದ್ದಾರೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಮೌನ ಪ್ರತಿಭಟನೆ ಮಾಡಲಾಗಿದೆ. ಹಲವು ಸಂಘಟನೆಯ ಮುಖಂಡರು ಮತ್ತು ಸ್ಥಳಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 12, 2024 04:20 PM