‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

Updated on: Apr 29, 2026 | 11:49 AM

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ2 ಆರೋಪಿ. ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂಕೊರ್ಟ್ ರದ್ದು ಮಾಡಿತ್ತು. ಈಗ ಜಾಮೀನು ಕೊಡುವಂತೆ ಅವರು ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್ ಅವರು ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕಳೆದ ವರ್ಷ ಆಗಸ್ಟ್ 14ರಂದು ಅವರು ಮತ್ತೆ ಅರೆಸ್ಟ್ ಆದರು. ಈಗ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಈಗ ದರ್ಶನ್ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ’ ಎಂಬ ಕಾರಣ ನೀಡಿ ಏ.14ರಂದೇ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ವಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More