Bengaluru; ಜೆಡಿಎಸ್ ಮತ್ತು ಬಿಜಪಿ ಒಂದಾಗಿವೆ ಎಂಬ ವದಂತಿ ಸುಳ್ಳು: ಹೆಚ್ ಡಿ ದೇವೇಗೌಡ, ಜೆಡಿಎಸ್ ವರಿಷ್ಠ
ಕುಮಾರಸ್ವಾಮಿ ಟ್ವೀಟ್ ಮೂಲಕ ಖಂಡಿಸಿದ್ದನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಶಾಸಕರು ಬುಧವಾರ ಸದನದಲ್ಲಿ ಪ್ರತಿಭಟನೆ ನಡೆಸಿದರು ಎಂದು ದೇವೇಗೌಡ ಹೇಳಿದರು.
ಬೆಂಗಳೂರು: ಗುರುವಾರ ರಾತ್ರಿ ನಗರದ ಖಾಸಗಿ ಹೋಟೆಲೊಂದರಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ಅವರು ತಮ್ಮ ಪಕ್ಷ ಮತ್ತು ಬಿಜೆಪಿ (BJP) ನಡುವೆ ಇತ್ತೀಚಿಗೆ ಹೆಚ್ಚುತ್ತಿರುವ ಬಾಂಧ್ಯವ್ಯದ ಬಗ್ಗೆ ಒಂದು ಸ್ಪಷ್ಟನೆ ನೀಡಿದರು. ಬೆಂಗಳೂರಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಗೆ ಹಿರಿಯ ಅಧಿಕಾರಿಗಳನ್ನು ಬಳಸಿಕೊಂಡಿದ್ದನ್ನು ಮಂಗಳವಾರದಂದು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮೂಲಕ ಖಂಡಿಸಿದ್ದನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಶಾಸಕರು ಬುಧವಾರ ಸದನದಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲಿ ಚೆನ್ನಪಟ್ಟಣದಲ್ಲಿ ಕುಮಾರಸ್ವಾಮಿ ತಮ್ಮ ಪಾಡಿಗೆ ತಾವು ಪ್ರತಿಭಟನೆ ನಡೆಸಿದರು. ಕೇವಲ ಇದನ್ನೇ ಮುಂದಿಟ್ಟುಕೊಂಡು ಜೆಡಿಎಸ್ ಮತ್ತು ಬಿಜೆಪಿ ಒಂದಾಗಿವೆ ಅಂತ ಹೇಳುವುದು ಸರಿಯಲ್ಲ ಎಂದು ದೇವೇಗೌಡ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ