Republic Day Parade 2023: ಗಣರಾಜ್ಯೋತ್ಸವ ಪರೇಡ್​​ನಲ್ಲಿ ರಾಜ್ಯದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಪ್ರದರ್ಶನ

TV9kannada Web Team

TV9kannada Web Team | Edited By: Vivek Biradar

Updated on: Jan 26, 2023 | 12:59 PM

Republic Day 2023: ನವದೆಹಲಿಯ ರಾಷ್ಟ್ರಪತಿ ಭವನದ ಕರ್ತವ್ಯಪಥ್​​ದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಕರ್ನಾಟಕದಿಂದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಪ್ರದರ್ಶನವಾಗಿದೆ.

ನವದೆಹಲಿಯ ರಾಷ್ಟ್ರಪತಿ ಭವನದ ಕರ್ತವ್ಯಪಥ್​​ದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್​​ನಲ್ಲಿ (Republic Day Parade) ಕರ್ನಾಟಕದಿಂದ ‘ನಾರಿ ಶಕ್ತಿ’ ಸ್ತಬ್ಧಚಿತ್ರ (Nari shakti Tableau) ಪ್ರದರ್ಶನವಾಗಿದೆ. ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯವಾಗಿದೆ. ಸ್ತಬ್ಧಚಿತ್ರದಲ್ಲಿ ಈ ಬಾರಿ ಆದರ್ಶ ಮಹಿಳೆಯರ ಸಾಧನೆ ಅನಾವರಣವಾಗಿದೆ. ಮೂವರು ಮಹಿಳೆಯರಿಗೆ ಸ್ತಬ್ಧಚಿತ್ರ ಸಮರ್ಪಣೆ ಮಾಡಲಾಗಿದೆ. ಸ್ತಬ್ಧಚಿತ್ರದಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಲಕ್ಕಿ, ಸಾಲುಮರದ ತಿಮ್ಮಕ್ಕ ಅವರ ಸಾಧನೆಗಳ ಪ್ರದರ್ಶನ ಮಾಡಲಾಗಿದೆ. ಹಾಗೇ ಗಿಡ-ಮರ, ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿದೆ. ಮುಂಭಾಗದಲ್ಲಿ ಹೆರಿಗೆ ತಜ್ಞೆ ಸೂಲಗಿತ್ತಿ ನರಸಮ್ಮ ಚಿತ್ರ, ಚನ್ನಪಟ್ಟಣದ ಗೊಂಬೆ ಮಾದರಿಯ ತೊಟ್ಟಿಲು ಚಿತ್ರ ಮತ್ತು ನರಸಮ್ಮನವರು ಮಗುವನ್ನು ಎತ್ತಿಕೊಂಡಿರುವಂತೆ ಚಿತ್ರ ಪ್ರದರ್ಶನಗೊಂಡಿದೆ.

Follow us on

Click on your DTH Provider to Add TV9 Kannada