ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಕೈಬಿಡಿ ಎಂದು ಈಶ್ವರಪ್ಪನ್ನು ವಿನಂತಿಸುವೆ: ಬಿವೈ ವಿಜಯೇಂದ್ರ

|

Updated on: Mar 16, 2024 | 2:00 PM

ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ತಾನಲ್ಲ, ಅದು ಪಕ್ಷದ ಸಂಸದೀಯ ಮಂಡಳಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರೀಯ ಚುನಾವಣಾ ಸಮತಿಯ ನಿರ್ಧಾರ ಎಂದು ವಿಜಯೇಂದ್ರ ಹೇಳಿದರು.

ಕಲಬುರಗಿ: ಇಂದು ಕಲಬುರಗಿಗೆ ಆಗಮಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಸ್ವಾಗತಿಸಲು ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ತಾನಲ್ಲ, ಅದು ಪಕ್ಷದ ಸಂಸದೀಯ ಮಂಡಳಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರೀಯ ಚುನಾವಣಾ ಸಮತಿಯ ನಿರ್ಧಾರ ಎಂದು ಹೇಳಿದರು. ತಮ್ಮ ಮಗ ಕಾಂತೇಶ್ ಗೆ ಹಾವೇರಿ ಟಿಕೆಟ್ ಸಿಗದ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ರೊಚ್ಚಿಗೆದ್ದು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿರುವ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪಗೆ ಮನವಿಯೊಂದನ್ನು ಮಾಡಿದ ವಿಜಯೇಂದ್ರ, ದಶಕಗಳಿಂದ ಅವರು ಪಕ್ಷದ ಕಟ್ಟಾಳು, ಆರಂಭದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು, ಅದನ್ನು ಕಟ್ಟಿ ಬೆಳೆಸಿದ್ದಾರೆ, ಪಕ್ಷದ ವರಿಷ್ಠರ ತೀರ್ಮಾನವನ್ನು ಒಪ್ಪಿಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈ ಬಿಡಲಿ ಎಂದರು. ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಸಹೋದರ ಬಿವೈ ರಾಘವೇಂದ್ರ ಈಗಾಗಲೇ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ ಮತ್ತು ಈ ಬಾರಿಯೂ ಗೆಲ್ಲಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್

Follow us on