‘ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ’: ಪರಿಷತ್ ಚುನಾವಣೆ ಸೋಲಿನ ಬಗ್ಗೆ ಸಿಎಂ ಡಿಕೆಶಿ ಪ್ರತಿಕ್ರಿಯೆ
ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಜನಾದೇಶವನ್ನು ಗೌರವದಿಂದ ಸ್ವೀಕರಿಸುತ್ತೇವೆ; ಲೋಪಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಕೊಳ್ಳುತ್ತೇವೆ ಎಂದು ಫಲಿತಾಂಶಕ್ಕೆ ಸಂಬಂಧಿಸಿ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮುಂದಿನ ಚುನಾವಣೆಗಳಿಗೆ ಇದು ಮುನ್ಸೂಚನೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಹಾಗಾದರೆ, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಉಪಚುನಾವಣೆಗಳ ಫಲಿತಾಂಶಗಳೂ ಮುಂಬರುವ ಚುನಾವಣೆಗಳ ಮುನ್ಸೂಚನೆಯಾಗಿದ್ದವೇ? ಎಂದವರು ಪ್ರಶ್ನಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 28: 4 ವಿಧಾನ ಪರಿಷತ್ ಸ್ಥಾನಗಳನ್ನು ಎನ್ಡಿಎ ಗೆದ್ದಿರುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ನಾವು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ. ನಮಗೆ ಒಂದು ಸ್ಥಾನವಿತ್ತು ಮತ್ತು ಅದನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದೆವು. ಆದರೆ, ಜನರು ಈಗ ನಮಗೆ ಒಂದು ಸಂದೇಶ ನೀಡಿದ್ದಾರೆ. ನಾವು ಫಲಿತಾಂಶಗಳನ್ನು ಅಧ್ಯಯನ ಮಾಡಿ, ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುತ್ತೇವೆ. ನಮಗೂ ಸಾಕಷ್ಟು ಮತಗಳು ಬಂದಿವೆ. ಫಲಿತಾಂಶವನ್ನು ಪರಿಶೀಲಿಸುತ್ತೇವೆ. ಮುಂದಿನ ಚುನಾವಣೆಗಳಿಗೆ ಇದು ಮುನ್ಸೂಚನೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಹಾಗಾದರೆ, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಉಪಚುನಾವಣೆಗಳ ಫಲಿತಾಂಶಗಳೂ ಮುಂಬರುವ ಚುನಾವಣೆಗಳ ಮುನ್ಸೂಚನೆಯಾಗಿದ್ದವೇ? ಆ ಫಲಿತಾಂಶಗಳ ಬಗ್ಗೆಯೂ ಪ್ರತಿಪಕ್ಷಗಳು ಮಾತನಾಡಬೇಕಲ್ಲವೇ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us