ಬೆಂಗಳೂರು ನಗರದಲ್ಲಿಂದು ಸಾಯಂಕಾಲ ಮಳೆ, ಬೇಸಿಗೆಯ ತಾಪದಿಂದ ನಿವಾಸಿಗಳಿಗೆ ತಾತ್ಕಾಲಿಕ ರಿಲೀಫ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 14, 2025 | 7:15 PM

ಮಳೆಯಿಂದ ಆಶ್ರಯ ಪಡೆಯಲು ಜನ ಅಂಗಡಿ ಮುಂಗಟ್ಟುಗಳನ್ನು, ಫ್ಲೈಓವರ್​ಗಳ ಕೆಳಭಾಗವನ್ನು ಆಶ್ರಯಿಸಿಕೊಳ್ಳುವುದು ಸಾಮಾನ್ಯ ದೃಶ್ಯ. ಇವತ್ತು ಡಾ ಬಿಅರ್ ಅಂಬೇಡ್ಕರ್ ಅವರ ಜನ್ಮ ವಾರ್ಷಿಕೋತ್ಸವದ ನಿಮಿತ್ತ ವಿಧಾನಸೌಧ ಮುಂದೆ ಪ್ರತಿವರ್ಷದಂತೆ ಈ ಸಲವೂ ದೊಡ್ಡ ದೊಡ್ಡ ಪೆಂಡಾಲ್​ಗಳನ್ನು ಹಾಕಲಾಗಿತ್ತು, ಜನ ಮಳೆಯಿಂದ ರಕ್ಷಿಸಿಕೊಳ್ಳಲು ಅಲ್ಲಿ ಆಶ್ರಯ ಪಡೆದರು.

ಬೆಂಗಳೂರು, ಏಪ್ರಿಲ್ 14: ಮಧ್ಯಾಹ್ನ ಬಿಸಿಲಿಂದ ಧಗಧಗಿಸುತ್ತಿದ್ದ ಬೆಂಗಳೂರು ಮಹಾನಗರ ಸಾಯಂಕಾಲ ಸುರಿದ  ಮಳೆಗೆ ತಂಪಾಯಿತು ಮಾರಾಯ್ರೇ. ನಗರ ಹಲವಾರು ಭಾಗಗಳಲ್ಲಿ ಸಾಧಾರಣ ಮತ್ತು ಹಗುರ ಮಳೆಯಾಗಿದೆ. ಮೆಜೆಸ್ಟಿಕ್ ಏರಿಯ, ಕಾರ್ಪೋರೇಷನ್ ಸರ್ಕಲ್, ಶಾಂತಿನಗರ, ಕೆಅರ್ ಸರ್ಕಲ್, ಕೆಆರ್ ಮಾರ್ಕೆಟ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಶಾಂತಿನಗರ, ವಿಲ್ಸನ್ ಗಾರ್ಡನ್, ಜಯನಗರ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ಸಾಮಾನ್ಯ ಜನಜೀವನ ಮತ್ತು ವಾಹನ ಸಂಚಾರ ಕೊಂಚಮಟ್ಟಿಗೆ ಪ್ರಭಾವಕ್ಕೊಳಗಾಗಿದ್ದವು.

ಇದನ್ನೂ ಓದಿ:  Karnataka Rains: ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಕರ್ನಾಟಕದ 20 ಜಿಲ್ಲೆಗಳಿಗೆ ಅಲರ್ಟ್​

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.