ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ನಿವೃತ್ತ ಯೋಧನಿಗೆ ಗಂಭೀರ ಗಾಯ, ಮನೆಯ ಮೇಲ್ಛಾವಣಿ , ಗೋಡೆ ಕುಸಿತ
ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಮತ್ತು ಗೋಡೆಗಳು ಕುಸಿದಿವೆ. ಗಾಯಗೊಂಡ ಯೋಧರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಮನೆಯಲ್ಲೇ ಹೇಗಾಗಿ ನೋಡಿ, ಇಲ್ಲಿದೆ ವಿಡಿಯೋ
ಬೆಂಗಳೂರು, ಅ.18: ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯಲ್ಲಿ ನಿನ್ನೆ (ಅ.17) ರಾತ್ರಿ ಸಿಲಿಂಡರ್ ಸ್ಫೋಟಗೊಂಡಿದ್ದು, (Cylinder blast Bengaluru) ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮದಿಂದ ಮನೆ ಮೇಲ್ಛಾವಣಿ ಮತ್ತು ಗೋಡೆಗಳು ಕುಸಿದಿದ್ದು, ಅಪಾರ ಹಾನಿಯಾಗಿದೆ. ಅಡುಗೆ ಮಾಡಲು ಹೋಗುವಾಗ ಈ ದುರ್ಘಟನೆ ನಡೆದಿದೆ. ಗಾಯಗೊಂಡ ನಿವೃತ್ತ ಯೋಧರನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ನೀಡಲಾಗಿದೆ. ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ. ರುದ್ರೇಗೌಡ ಎಂಬುವವರು ಈ ಮನೆಯನ್ನು ನಿವೃತ್ತ ಯೋಧರಿಗೆ ಬಾಡಿಗೆಗೆ ನೀಡಿದ್ದರು, ಕಳೆದ 15 ವರ್ಷಗಳಿಂದ ಯೋಧರು ಈ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಫೋಟದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

