AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ

ಪ್ರಸನ್ನ ಗಾಂವ್ಕರ್​
| Edited By: |

Updated on:Jun 18, 2026 | 5:46 PM

Share

ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ತಪ್ಪಿದ ಬಗ್ಗೆ ಹೆಚ್.ಡಿ. ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಪ್ರಧಾನಿ ಸ್ಥಾನವನ್ನೇ ತ್ಯಾಗ ಮಾಡಿದವರು, ಹೀಗಾಗಿ ರಾಜ್ಯಸಭಾ ಸ್ಥಾನ ಕೇಳಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿ ಅವರಿಗೂ ಟೋಪಿ ಹಾಕಲಾಯಿತು. ಅವರಿಗೆ ಕೊಟ್ಟರೆ ನಾವೇನು ಬೇಡ ಅಂತಿದ್ವಾ ಎಂದು ರೇವಣ್ಣ ಹೇಳಿರೋದು ಕುತೂಹಲ ಮೂಡಿಸಿದೆ.

ಬೆಂಗಳೂರು, ಜೂನ್​​ 18: ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ. ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ರಾಜ್ಯಸಭಾ ಸ್ಥಾನಕ್ಕೆ ಮೊದಲು ದೇವೇಗೌಡರು ಮತ್ತು ಸದಾನಂದಗೌಡರ ಹೆಸರುಗಳು ಕೇಳಿಬಂದಿದ್ದವು. ನಂತರ ಮಂಡ್ಯದ ಮೇಡಂ ಎಂದು ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ ರೇವಣ್ಣ, ಅವರಿಗೂ ಟೋಪಿ ಹಾಕಲಾಯಿತು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 18, 2026 05:44 PM

Follow Us