ಮೂರ್ನಾಲ್ಕು ಜನ ವೈದ್ಯರಿಂದ ರೇವಣ್ಣ ತಪಾಸಣೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 05, 2024 | 7:01 PM

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್‌.ಡಿ.ರೇವಣ್ಣ(HD Revanna) ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಯಲ್ಲಿ ಶಾಸಕ ಹೆಚ್‌.ಡಿ.ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಬೆಂಗಳೂರು, ಮೇ.05: ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್‌.ಡಿ.ರೇವಣ್ಣ(HD Revanna) ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಯಲ್ಲಿ ಶಾಸಕ ಹೆಚ್‌.ಡಿ.ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. 10 ನಿಮಿಷದಿಂದ ಬೌರಿಂಗ್ ಆಸ್ಪತ್ರೆಯ ನಾಲ್ವರು ವೈದ್ಯರ ತಂಡದಿಂದ ರೇವಣ್ಣಗೆ ಬಿಪಿ, ಶುಗರ್, ಇಸಿಜಿ ತಪಾಸಣೆ ಮಾಡುತ್ತಿದ್ದಾರೆ. ಏನಾದರೂ ಸಮಸ್ಯೆ ಇದೆಯಾ ಎಂದು ವೈದ್ಯರು ರೇವಣ್ಣರನ್ನು ಕೇಳುತ್ತಿದ್ದಾರೆ. HDR ಆರೋಗ್ಯದಲ್ಲಿ ಏನಾದ್ರೂ ವ್ಯತ್ಯಾಸವಾಗಿದೆಯಾ ಎಂದು ತಪಾಸಣೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ