ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ; ಆ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ, ಹೈದರಬಾದ್​​​ಗೆ ಸಿಂಗಾಪುರ ಪ್ರತಿಸ್ಪರ್ಧಿ : ಸಿಎಂ ರೇವಂತ್ ರೆಡ್ಡಿ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ವ್ಯಂಗ್ಯವಾಡಿದ್ದು, ಹೈದರಾಬಾದ್ ಮಾಲಿನ್ಯ ಮುಕ್ತವಾಗಿ ಸಿಂಗಾಪುರ್, ಟೋಕಿಯೊಗೆ ಸ್ಪರ್ಧೆ ನೀಡಲಿದೆ ಎಂದಿದ್ದಾರೆ. ಮುಂಬೈ, ಚೆನ್ನೈ ಮೂಲಸೌಕರ್ಯಗಳನ್ನೂ ಟೀಕಿಸಿದ್ದಾರೆ. ಬೆಂಗಳೂರು ಕೇವಲ ಟ್ರಾಫಿಕ್‌ಗೆ ಹೆಸರಾಗಿದೆ ಎಂಬ ಅವರ ಹೇಳಿಕೆ ಕನ್ನಡಿಗರ ಮತ್ತು ರಾಜಕೀಯ ನಾಯಕರ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇದು ಬೆಂಗಳೂರಿನ ಬ್ರ್ಯಾಂಡ್ ಇಮೇಜ್‌ಗೆ ಧಕ್ಕೆ ತಂದಿದೆ.

ಹೈದರಾಬಾದ್, ಮಾ.9: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,” ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. ಳೆ ಬಂದರೆ ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನು ಪ್ರಸ್ತಾಪಿಸಿದ ಅವರು, ಹೈದರಾಬಾದ್ ಅಂತಹ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಪ್ರತಿಪಾದಿಸಿದರು.”ಹೈದರಾಬಾದ್ ಅನ್ನು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಮಗೆ ಬೆಂಗಳೂರು ಅಥವಾ ಮುಂಬೈ ನಗರಗಳು ಸ್ಪರ್ಧಿಯಲ್ಲ. ನಮ್ಮ ಸ್ಪರ್ಧೆ ಏನಿದ್ದರೂ ಸಿಂಗಾಪುರ ಮತ್ತು ಟೋಕಿಯೋದಂತಹ ಜಾಗತಿಕ ನಗರಗಳ ಜೊತೆಗೆ,” ಎಂದು ಅವರು ಘೋಷಿಸಿದ್ದಾರೆ.ಇದೀಗ ಈ ಹೇಳಿಕೆ ಕನ್ನಡಿಗರ ಮತ್ತು ಕರ್ನಾಟಕದ ರಾಜಕೀಯ ನಾಯಕರ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us