ಹಾಸನ, ಅಕ್ಟೋಬರ್ 31: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಗುರುವಾರ ಮಾರಾಮಾರಿ ನಡೆದಿದೆ. ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.
ಅಂದಹಾಗೆ, ಎರಡು ದಿನ ಹಿಂದಷ್ಟೇ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ