Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರು ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡರ ಮುಂದೆ ಕೈಕಟ್ಟಿ ನಿಂತಿದ್ದು ಯಾಕೆ ಗೊತ್ತಾ?

ಈ ವಿಡಿಯೋದಲ್ಲಿ ಗಮನಿಸಬೇಕಾದ ಅಂಶವೆಂದರೆ, ಅಧಿಕಾರಿಗಳ ಕರ್ತವ್ಯಲೋಪ ನಿಚ್ಚಳವಾಗಿ ಕಾಣುತ್ತಿದ್ದರೂ ಮತ್ತು ತಮ್ಮ ಪ್ರಶ್ನೆಗಳಿಗೆ ಉತ್ತರ ಸಿಗದಿದ್ದರೂ ಸಚಿವ ಕೃಷ್ಣ ಭೈರೇಗೌಡ ಅವರ ಮೇಲೆ ರೇಗುತ್ತಾರೆಯೇ ಹೊರತು, ಏಕವಚನದ ಪ್ರಯೋಗ ಮಾಡಲ್ಲ, ಬಯ್ಯಲ್ಲ; ಸಭ್ಯ ಭಾಷೆಯಲ್ಲೇ ತರಾಟೆಗೆ ತೆಗೆದುಕೊಳ್ಳುತ್ತಾರೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Feb 06, 2024 | 4:10 PM

ಮೈಸೂರು: ಸರ್ಕಾರೀ ಅಧಿಕಾರಿಗಳಲ್ಲಿ ಕರ್ತವ್ಯಲೋಲುಪತೆ, ಜಡತ್ವ, ಕರ್ತವ್ಯಲೋಪವನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಯಾವ ಕಾರಣಕ್ಕೂ ಸಹಿಸಲ್ಲ. ಅವರು ನಡೆಸುವ ಪ್ರಗತಿ ಪರಿಶೀಲನಾ ಸಭೆಗಳನ್ನು (KDP meeting) ನೀವು ನೋಡಿರಬಹುದು. ಮುಲಾಜಿಲ್ಲದೆ ತಪ್ಪಿತಸ್ಥ ಆಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಇಂದು ಅವರು ಜಿಲ್ಲೆಯ ಹುಣಸೂರು ತಾಲ್ಲೂಕು ಕಚೇರಿಗೆ (Hunsur taluk office) ಸರ್ಪೈಸ್ ಭೇಟಿ ನೀಡಿ ಅಲ್ಲಿನ ನ್ಯೂನತೆಗಳನ್ನು ಕಂಡು ಅಧಿಕಾರಿಗಳ ಬೇಜವಬ್ದಾರಿತನವನ್ನು ತರಾಟೆಗೆ ತೆಗೆದುಕೊಂಡರು. ನಿರ್ದಿಷ್ಟವಾಗಿ ಜುಲೈ ತಿಂಗಳ ಎಂಟ್ರಿಗಳು ಮತ್ತು ಫಾರ್ವರ್ಡ್ ಆಗಿರುವ ಕಡತಗಳ ಬಗ್ಗೆ ಹಲವಾರು ಲೋಪಗಳನ್ನು ಅವರೆದುರು ಕೈಕಟ್ಟಿ ನಿಂತಿದ್ದ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತಂದರು. ಅವರ ಯಾವ ಪ್ರಶ್ನೆಗೂ ಅಧಿಕಾರಿಗಳಿಂದ ಸಮಾಧಾನಕರ ಉತ್ತರ ಸಿಗಲಿಲ್ಲ. ಕಚೇರಿಯ ಒಂದು ಗುಡ್ಡೆ ಬಿದ್ದಿದ್ದ ಕಡತಗಳನ್ನು ನೋಡಿ ಅವುಗಳ ಸ್ಟೇಟಸ್ ಬಗ್ಗೆ ವಿಚಾರಿಸಿದರು. ಅಧಿಕಾರಿಗಳದ್ದು ಅದೇ ಪೆ ಪೆ ಪೆ ಉತ್ತರ. ಈ ವಿಡಿಯೋದಲ್ಲಿ ಗಮನಿಸಬೇಕಾದ ಅಂಶವೆಂದರೆ, ಅಧಿಕಾರಿಗಳ ಕರ್ತವ್ಯಲೋಪ ನಿಚ್ಚಳವಾಗಿ ಕಾಣುತ್ತಿದ್ದರೂ ಮತ್ತು ತಮ್ಮ ಪ್ರಶ್ನೆಗಳಿಗೆ ಉತ್ತರ ಸಿಗದಿದ್ದರೂ ಸಚಿವ ಕೃಷ್ಣ ಭೈರೇಗೌಡ ಅವರ ಮೇಲೆ ರೇಗುತ್ತಾರೆಯೇ ಹೊರತು, ಏಕವಚನದ ಪ್ರಯೋಗ ಮಾಡಲ್ಲ, ಬಯ್ಯಲ್ಲ; ಸಭ್ಯ ಭಾಷೆಯಲ್ಲೇ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು