ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ

Edited By:

Updated on: Nov 04, 2026 | 10:53 AM

ಕಳೆದ 2-3 ತಿಂಗಳಲ್ಲಿ ಅಕ್ಕಿ ಬೆಲೆ ಶೇ 25-30ರಷ್ಟು ಹೆಚ್ಚಳವಾಗಿದ್ದು, ಕೆಜಿ ಅಕ್ಕಿ ನೂರು ರೂಪಾಯಿ ಗಡಿ ದಾಟಿದೆ. ಮುಂಗಾರು ಮಳೆ ಕೊರತೆ, ಭತ್ತದ ನಾಟಿ ಮತ್ತು ಇಳುವರಿ ಕುಸಿತವೇ ಇದಕ್ಕೆ ಮುಖ್ಯ ಕಾರಣ. ಹೋಟೆಲ್ ಉದ್ಯಮದಲ್ಲಿ ಅಕ್ರಮ ದಾಸ್ತಾನಿಗೆ ಸರ್ಕಾರ ಎಚ್ಚರಿಕೆ ನೀಡಿದ್ದು, ಆಹಾರ ಸಚಿವ ರಿಜ್ವಾನ್ ಅರ್ಷದ್ ದಾಸ್ತಾನುದಾರರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ಬೆಂಗಳೂರು, ನವೆಂಬರ್ 4: ಕಳೆದ ಎರಡು-ಮೂರು ತಿಂಗಳಲ್ಲಿ ರಾಜ್ಯದಲ್ಲಿ ಅಕ್ಕಿ ಬೆಲೆ ಶೇಕಡ 25 ರಿಂದ 30 ರಷ್ಟು ಹೆಚ್ಚಳವಾಗಿದ್ದು, ಪ್ರತಿ ಕೆಜಿ ಅಕ್ಕಿಯ ಬೆಲೆ ನೂರು ರೂಪಾಯಿ ಗಡಿ ದಾಟಿದೆ. ಮುಂಗಾರು ಮಳೆ ಕೊರತೆಯಿಂದಾಗಿ ಭತ್ತದ ನಾಟಿ ಮತ್ತು ಇಳುವರಿ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರಿನಂತಹ ಭತ್ತ ಬೆಳೆಯುವ ಪ್ರದೇಶಗಳಲ್ಲಿ ನಾಟಿ ಇಳಿಕೆಯಾಗಿದೆ.

ಸೋನಾ ಮಸೂರಿ, ಸ್ಟೀಮ್ ರೈಸ್, ಕೊಲಂ ರೈಸ್, ಬಾಸ್ಮತಿ, ಜೀರಾ ರೈಸ್ ಮತ್ತು ರಾಜ್ಮುಡಿ ಸೇರಿದಂತೆ ವಿವಿಧ ಅಕ್ಕಿ ಪ್ರಭೇದಗಳ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅಕ್ಕಿ ಕೊರತೆಯ ಭೀತಿಯಲ್ಲಿರುವ ಹೋಟೆಲ್ ಉದ್ಯಮವು ಸಹ ತೊಂದರೆ ಅನುಭವಿಸುತ್ತಿದೆ. ಈಮಧ್ಯೆ, ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡುವವರಿಗೆ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದ್ದು, ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಅಕ್ರಮ ಸಂಗ್ರಹಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈಗಾಗಲೇ ಸುಮಾರು 18 ಲಕ್ಷ ಕೆಜಿ ಅಕ್ಕಿಯನ್ನು ಸೀಜ್ ಮಾಡಲಾಗಿದ್ದು, 232ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More