ವೇಗವಾಗಿ ಬಂದು ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!

Edited By:

Updated on: Jan 16, 2026 | 4:13 PM

ಅತಿವೇಗದಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎರಡು ದಿನಗಳ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ.

ಗದಗ, ಜನವರಿ 16: ಬೈಕ್​​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅತಿವೇಗದಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎರಡು ದಿನಗಳ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ. ಗೌಸ್ಮುದ್ದೀನ್ ಒಂಟಿ (27), ಫಾತಿಮಾ ಗೌಸ್ಮುದ್ದೀನ್ ಒಂಟಿ (53), ಖುಬುದ್ದೀನ್ ಒಂಟಿ (5), ಗಂಗವ್ವ ನಾಯ್ಕರ್ (75) ಮತ್ತು ಭೀಮಪ್ಪ ನಾಯ್ಕರ್ (80) ಘಟನೆಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 16, 2026 04:12 PM