AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ರಮೇಶ್ ಬಿ. ಜವಳಗೇರಾ
|

Updated on: Mar 23, 2026 | 6:10 PM

Share

ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿತ್ತು. ಬಳಿಕ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದಾಗ ಕಾರು ಡ್ರಿಫ್ಟಿಂಗ್‌ ಮಾಡಿರುವುದು ರಿಕ್ಕಿ ರೈ ಎನ್ನುವುದು ಪತ್ತೆಯಾಗಿದೆ. ಹೀಗಾಗಿ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ಜಾರಿ ಮಾಡಿದ್ದಾರೆ.

ಬೆಂಗಳೂರು, (ಮಾರ್ಚ್ 23): ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿತ್ತು. ಬಳಿಕ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದಾಗ ಕಾರು ಡ್ರಿಫ್ಟಿಂಗ್‌ ಮಾಡಿರುವುದು ರಿಕ್ಕಿ ರೈ ಎನ್ನುವುದು ಪತ್ತೆಯಾಗಿದೆ. ಹೀಗಾಗಿ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

Follow Us