IND vs NZ: 6,6,4,4.. ಕೊನೆಯ ಓವರ್ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ
Rinku Singh's Explosive 44: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ರಿಂಕು ಸಿಂಗ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು 239 ರನ್‌ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದ ರಿಂಕು, 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು. ಅವರ ಈ ಆಕ್ರಮಣಕಾರಿ ಇನ್ನಿಂಗ್ಸ್ ಭಾರತಕ್ಕೆ ಭಾರಿ ಮೊತ್ತ ಗಳಿಸಲು ನೆರವಾಯಿತು.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್‌ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು.
ತಂಡದ ಪರ ಕೊನೆಯ ಓವರ್‌ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು. ಅವರ ಆಕ್ರಮಣಕಾರಿ ಬ್ಯಾಟಿಂಗ್ ಭಾರತ 200 ರನ್‌ಗಳ ಗಡಿ ದಾಟಲು ಸಹಾಯ ಮಾಡಿತು. ರಿಂಕು 220 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ರಿಂಕು ಸಿಂಗ್ ಡ್ಯಾರೆಲ್ ಮಿಚೆಲ್ ಬೌಲ್ ಮಾಡಿದ ಇನ್ನಿಂಗ್ಸ್ನ ಕೊನೆಯ ಓವರ್ನಲ್ಲಿ 2 ಸಿಕ್ಸರ್ ಹಾಗೂ 2 ಸಿಕ್ಸರ್ ಸಹಿತ 21 ರನ್ ಕಲೆಹಾಕಿದರು.

