IND vs NZ: 6,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ

Updated on: Jan 21, 2026 | 9:35 PM

Rinku Singh's Explosive 44: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ರಿಂಕು ಸಿಂಗ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು 239 ರನ್‌ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದ ರಿಂಕು, 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು. ಅವರ ಈ ಆಕ್ರಮಣಕಾರಿ ಇನ್ನಿಂಗ್ಸ್ ಭಾರತಕ್ಕೆ ಭಾರಿ ಮೊತ್ತ ಗಳಿಸಲು ನೆರವಾಯಿತು.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್​ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು.

ತಂಡದ ಪರ ಕೊನೆಯ ಓವರ್​ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು. ಅವರ ಆಕ್ರಮಣಕಾರಿ ಬ್ಯಾಟಿಂಗ್ ಭಾರತ 200 ರನ್‌ಗಳ ಗಡಿ ದಾಟಲು ಸಹಾಯ ಮಾಡಿತು. ರಿಂಕು 220 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್​ ಬೀಸಿದ ರಿಂಕು ಸಿಂಗ್ ಡ್ಯಾರೆಲ್ ಮಿಚೆಲ್ ಬೌಲ್ ಮಾಡಿದ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ 2 ಸಿಕ್ಸರ್ ಹಾಗೂ 2 ಸಿಕ್ಸರ್ ಸಹಿತ 21 ರನ್ ಕಲೆಹಾಕಿದರು.