ಅಬ್ಬರಿಸಿದ ರಿಂಕು ಸಿಂಗ್: ಮೀರತ್ ಪಡೆಗೆ ಭರ್ಜರಿ ಜಯ
Kashi Rudras vs Meerut Mavericks: ಈ ಸುಲಭ ಗುರಿಯನ್ನು ಬೆನ್ನತ್ತಿದ ಮೀರತ್ ಮಾವೆರಿಕ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 26 ರನ್ ಆಗುವಷ್ಟರಲ್ಲಿ ಅಗ್ರಪಂಕ್ತಿಯ ಮೂವರು ಬ್ಯಾಟರ್ಗಳು ಪೆವಿಲಿಯನ್ಗೆ ಮರಳಿದ್ದರು. ಈ ಹಂತದಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಸ್ಫೋಟಕ ಇನಿಂಗ್ಸ್ ಆಡಿದರು.
ಯುಪಿ ಟಿ20 ಲೀಗ್ನ 27ನೇ ಪಂದ್ಯದಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮಾವೆರಿಕ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕಾಶಿ ರುದ್ರಾಸ್ ಮತ್ತು ಮೀರತ್ ಮಾವೆರಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕಾಶಿ ರುದ್ರಾಸ್ ಪರ ಕರಣ್ ಶರ್ಮಾ 50 ಎಸೆತಗಳಲ್ಲಿ 61 ರನ್ ಕಲೆಹಾಕಿದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಕಾಶಿ ರುದ್ರಾಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 135 ರನ್ಗಳಿಸಲಷ್ಟೇ ಶಕ್ತರಾದರು.
ಈ ಸುಲಭ ಗುರಿಯನ್ನು ಬೆನ್ನತ್ತಿದ ಮೀರತ್ ಮಾವೆರಿಕ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 26 ರನ್ ಆಗುವಷ್ಟರಲ್ಲಿ ಅಗ್ರಪಂಕ್ತಿಯ ಮೂವರು ಬ್ಯಾಟರ್ಗಳು ಪೆವಿಲಿಯನ್ಗೆ ಮರಳಿದ್ದರು. ಈ ಹಂತದಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಸ್ಫೋಟಕ ಇನಿಂಗ್ಸ್ ಆಡಿದರು.
ಹೊಡಿಬಡಿ ಆಟಕ್ಕೆ ಒತ್ತು ನೀಡಿದ ರಿಂಕು ಸಿಂಗ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 48 ಎಸೆತಗಳಲ್ಲಿ ಅಜೇಯ 78 ರನ್ ಬಾರಿಸಿದರು. ಈ ಸ್ಫೋಟಕ ಅರ್ಧಶತಕದೊಂದಿಗೆ ರಿಂಕು ಸಿಂಗ್ ಮೀರತ್ ಮಾವೆರಿಕ್ಸ್ ತಂಡವನ್ನು 15.4 ಓವರ್ಗಳಲ್ಲಿ ಗುರಿ ಮುಟ್ಟಿಸಿ 7 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಮೀರತ್ ಮಾವೆರಿಕ್ಸ್ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.
