SA vs IND 1st T20I: ರಿಂಕು ಸಿಂಗ್ ಬಗ್ಗೆ ರಾಹುಲ್ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ

SA vs IND 1st T20I: ರಿಂಕು ಸಿಂಗ್ ಬಗ್ಗೆ ರಾಹುಲ್ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ

Vinay Bhat
|

Updated on: Dec 10, 2023 | 9:43 AM

Rinku Singh, India vs South Africa 1st T20I: ಇಂದು ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ತನ್ನ ಬಗ್ಗೆ ಏನೆಲ್ಲ ಅಭಿಪ್ರಾಯ ಹೊಂದಿದ್ದಾರೆ ಎಂಬ ಕುರಿತು ರಿಂಕು ಸಿಂಗ್ ಬಿಸಿಸಿಐ ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ ಹೇಳಿದ್ದಾರೆ.

ಅಲ್ಪಾವಧಿಯಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಫಿನಿಶರ್ ಆಗಿ ಗುರಿತಿಸಿಕೊಂಡಿರುವ ರಿಂಕು ಸಿಂಗ್ (Rinku Singh) ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ಅಬ್ಬರಿಸಲು ತಯಾರಾಗಿದ್ದಾರೆ. ಇಂದು ನಡೆಯಲಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದಲ್ಲಿ ರಿಂಕು ಮೇಲೆ ಎಲ್ಲರ ಕಣ್ಣಿದೆ. ಇದಕ್ಕೂ ಮುನ್ನ ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದರಲ್ಲಿ ರಿಂಕು ಸಿಂಗ್ ಮಾತನಾಡಿದ್ದಾರೆ. ರಾಹುಲ್ ದ್ರಾವಿಡ್ ತನ್ನ ಬಗ್ಗೆ ಏನೆಲ್ಲ ಅಭಿಪ್ರಾಯ ಹೊಂದಿದ್ದಾರೆ ಎಂಬ ಕುರಿತು ಹೇಳಿದ್ದಾರೆ. ”ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟಿ20I ಗಳಲ್ಲಿ ನಾನು 5 ಅಥವಾ 6ನೇ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಆಡುವುದನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದ್ದಾರೆ. “ಮೊದಲ ಅಭ್ಯಾಸದ ಅವಧಿಯಲ್ಲಿ, ಉತ್ತಮ ಹವಾಮಾನದಿಂದಾಗಿ ನಾನು ಆನಂದಿಸಿದೆ. ದ್ರಾವಿಡ್ ಸರ್ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು, ಇದು ಉತ್ತಮ ಭಾವನೆಯಾಗಿದೆ. ನಾನು ಆಡುವ ರೀತಿಯಲ್ಲೇ ಮುಂದುವರಿಸಲು ಮತ್ತು ನಮ್ಮ ನಂಬಿಕೆಯನ್ನು ಕಳೆದಕೊಳ್ಳಬಾರದು ಎಂದು ಅವರು ನನಗೆ ಹೇಳಿದರು,” ಎಂಬುದು ರಿಂಕು ಮಾತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ