ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾಗೆ ಸಿಗುತ್ತಾ ಗೇಟ್​ಪಾಸ್?

Updated on: Nov 08, 2025 | 9:10 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಕಾನ್ಫಿಡೆನ್ಸ್​ನಿಂದ ಆಡುತ್ತಿದ್ದಾರೆ. ಆದರೆ, ಕೆಲವರಿಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಲ್ಲಿ ಪ್ರಮುಖವಾಗಿ ಇರುವವರು ರಿಷಾ. ಈಗ ರಿಷಾ ಅವರಿಗೆ ಗೇಟ್​ಪಾಸ್ ಸಿಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಆ ಬಗ್ಗೆ  ಇಲ್ಲಿದೆ ವಿವರ.

ಈ ವಾರದ ಆರಂಭದಲ್ಲಿ ಗಿಲ್ಲಿ ಮೇಲೆ ರಿಷಾ ಗೌಡ ಅವರು ಹಲ್ಲೆ ಮಾಡಿದ್ದರು. ಸಾಮಾನ್ಯವಾಗಿ ಹಲ್ಲೆ ಮಾಡಿದ ತಕ್ಷಣ ಅವರನ್ನು ಮನೆಯಿಂದ ಕಳುಹಿಸಲಾಗುತ್ತದೆ. ಆದರೆ, ಹಲ್ಲೆ ನಡೆದ ದಿನ ಅವರನ್ನು ಮನೆಯಿಂದ ಕಳುಹಿಸಿರಲಿಲ್ಲ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಅವರು ದೊಡ್ಮನೆಯಿಂದ ಹೊರಕ್ಕೆ ಹೊಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಇಂದಿನ ಎಪಿಸೋಡ್​​​ನಲ್ಲಿ ಆ ವಿಚಾರ ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More