ಐತಿಹಾಸಿಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ‘ಕಾಂತಾರ’ ಸ್ಟಾರ್ ರಿಷಬ್
ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳ ಜೊತೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ದೇವಸ್ಥಾನ ತುಂಗಾ ನದಿ ತಟದಲ್ಲಿದ್ದು, ಹಲವು ವರ್ಷಗಳ ಇತಿಹಾಸ ಇದೆ.
ನಟ ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ಅವರಿಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಅವರು ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಈಗ ರಿಷಬ್ ಶೆಟ್ಟಿ (Rishab Shetty) ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳ ಜೊತೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ದೇವಸ್ಥಾನ ತುಂಗಾ ನದಿ ತಟದಲ್ಲಿದ್ದು, ಹಲವು ವರ್ಷಗಳ ಇತಿಹಾಸ ಇದೆ. ಮಠದ ಆವರಣದಲ್ಲಿ ಅಭಿಮಾನಿಗಳ ಜೊತೆ ಫೋಟೋಗೆ ರಿಷಬ್ ಪೋಸ್ ಕೊಟ್ಟಿದ್ದಾರೆ. ‘ಕಾಂತಾರ’ ಸಿನಿಮಾ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಒಳ್ಳೆಯ ಕಮಾಯಿ ಮಾಡಿತ್ತು. ಈ ಕಾರಣಕ್ಕೆ ಎರಡನೇ ಪಾರ್ಟ್ ಬಗ್ಗೆ ನಿರೀಕ್ಷೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos